alex Certify 14 ಕ್ಷೇತ್ರಗಳಲ್ಲಿ ಇಂದು ಸಂಜೆಯಿಂದ ಮನೆ ಮನೆ ಪ್ರಚಾರ, ಶುಕ್ರವಾರ ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

14 ಕ್ಷೇತ್ರಗಳಲ್ಲಿ ಇಂದು ಸಂಜೆಯಿಂದ ಮನೆ ಮನೆ ಪ್ರಚಾರ, ಶುಕ್ರವಾರ ಮತದಾನ

ಬೆಂಗಳೂರು: ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಲಿದೆ.

ಪ್ರಚಾರದ ಅಬ್ಬರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯವಾಗಲಿದ್ದು, ಅಭ್ಯರ್ಥಿಗಳು, ಕಾರ್ಯಕರ್ತರು ಮನೆ ಮನೆ ಪ್ರಚಾರ ಕೈಗೊಳ್ಳಬಹುದು. ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಮುಖಂಡರು ಕ್ಷೇತ್ರ ಬಿಟ್ಟು ತೆರಳಬೇಕಿದೆ. ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮೊದಲು ಬಹಿರಂಗ ಪ್ರಚಾರ ಪಂದ್ಯಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಗೆ ಅಬ್ಬರದ ಪ್ರಚಾರಕ್ಕೆ ತೆರೆ ಬೀಳಲಿದೆ.

ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕಣದಲ್ಲಿರುವ ಪ್ರಮುಖರು:

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವರಾದ ವಿ. ಸೋಮಣ್ಣ, ಕೆ. ಸುಧಾಕರ್, ರಾಜ ವಂಶಸ್ಥ ಯದುವೀರ್ ಒಡೆಯರ್ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿದ್ದಾರೆ.

ಘಟಾನುಘಟಿ ನಾಯಕರ ಪ್ರಚಾರ:

ಎನ್.ಡಿ.ಎ. ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು, ಮಂಗಳೂರು, ಮೈಸೂರು, ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ನಡೆಸಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರು ಸೇರಿ ಹಲವೆಡೆ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರ ಮತ್ತು ಮಂಡ್ಯದಲ್ಲಿ, ಪ್ರಿಯಾಂಕಾ ಗಾಂಧಿ ಚಿತ್ರದುರ್ಗ, ಬೆಂಗಳೂರಿನಲ್ಲಿ ಪ್ರಚಾರ ನಡೆಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಹೆಚ್.ಡಿ. ಕುಮಾರಸ್ವಾಮಿ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಸೇರಿದಂತೆ ಘಟಾನುಘಟಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಏಪ್ರಿಲ್ 26ರಂದು ಮತದಾನ ನಡೆಯುವ ಕ್ಷೇತ್ರಗಳು:

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಾಮರಾಜನಗರ, ಮೈಸೂರು –ಕೊಡಗು, ಉಡುಪಿ –ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...