alex Certify ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಅಂಚೆ ಮತ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಅಂಚೆ ಮತ ಸೌಲಭ್ಯ

ಬೆಂಗಳೂರು: ಇದೇ ಮೊದಲ ಬಾರಿಗೆ ಮಾನ್ಯತೆ ಪಡೆದ ಪತ್ರಕರ್ತರಿಗೆ ಸೇವಾ ಮತದಾರ ಸೌಲಭ್ಯದಡಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಅಂಚೆ ಮತ ಸೌಲಭ್ಯ ಕಲ್ಪಿಸಲಾಗಿದೆ. ಸೇವಾ ಮತದಾರರು ಯಾವ ರೀತಿಯಲ್ಲಿ ಮತದಾನ ಮಾಡುತ್ತಾರೋ ಅದೇ ಮಾದರಿಯಲ್ಲಿ ಮಾನ್ಯತೆ ಪಡೆದ ಪತ್ರಕರ್ತರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಶೀಘ್ರದಲ್ಲಿಯೇ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬ್ಯಾಲೆಟ್ ಪೇಪರ್ ಮೂಲಕ ಮತದಾನ ಮಾಡಬಹುದಾಗಿದೆ. ಪತ್ರಕರ್ತರು ಒಂದು ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಮತ್ತೊಂದು ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ಪ್ರಕರಣಗಳು ಸಾಕಷ್ಟು ಇದ್ದವು. ಬಹಳಷ್ಟು ಮಂದಿ ಪತ್ರಕರ್ತರು ಮತದಾನದಿಂದ ವಂಚಿತರಾಗುತ್ತಿದ್ದರು. ಇದನ್ನು ತಪ್ಪಿಸುವ ಉದ್ದೇಶದಿಂದ ಅಂಚೆ ಮತ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಧನ್ಯವಾದ:

ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ(ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ. ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು) ತಮ್ಮ ಮತವಿರುವ ಕ್ಷೇತ್ರದಲ್ಲಿ ಮತದಾನ ಮಾಡಲು ಅವಕಾಶ ದೊರೆತಿರುವುದು ಅನುಕೂಲವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.

ಆನ್ ಲೈನ್ ವೋಟಿಂಗ್ ಅವಕಾಶ ಕೋರಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕೆಯುಡಬ್ಲ್ಯೂಜೆ ಪತ್ರ ಬರೆದಿತ್ತು. ದೃಶ್ಯ ಮುದ್ರಣ, ರೇಡಿಯೋ ಮಾಧ್ಯಮಗಳ ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು ಪ್ರತಿ ಚುನಾವಣೆ ವೇಳೆಯಲ್ಲೂ ಮತದಾನದಿಂದ ವಂಚಿತರಾಗುತ್ತಿದ್ದಾರೆ ಎನ್ನುವ ವಿಷಯವನ್ನು ಗಮನಕ್ಕೆ ತಂದಿತ್ತು.

ಕಾರ್ಯದೊತ್ತಡದ ನಡುವೆ ತಮ್ಮ ಸ್ವಂತ ಕ್ಷೇತ್ರಗಳಿಗೆ ಹೋಗಿ ಮತದಾನ ಮಾಡಲು ಆಗುತ್ತಿಲ್ಲ. ಹೀಗಾಗಿ ಬಹುತೇಕ ಪತ್ರಕರ್ತರು ಮತದಾನದಿಂದ ದೂರವೇ ಉಳಿಯುತ್ತಿದ್ದಾರೆ. ಆದ್ದರಿಂದ ಅಗತ್ಯವಿರುವ ಪತ್ರಕರ್ತರಿಗೂ ಆನ್ ಲೈನ್ ಮೂಲಕ ಮತದಾನ ಮಾಡುವ ವ್ಯವಸ್ಥೆ ಮಾಡಿಕೊಡಬೇಕು ಎಂದು ಕೆಯುಡಬ್ಲ್ಯೂಜೆ ವಿನಂತಿಸಿಕೊಂಡಿತ್ತು.

ಪತ್ರಕರ್ತರ ಬೇಡಿಕೆ ಪರಿಗಣಿಸಿ ಪೋಸ್ಟಲ್ ವೋಟಿಂಗ್ ಅವಕಾಶ ಮಾಡಿಕೊಟ್ಟಿರುವ ಚುನಾವಣಾ ಆಯೋಗಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಧನ್ಯವಾದ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...