ಬೆಂಗಳೂರು : ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಗಳಿಗೂ ರಾಜಕೀಯ ಸಲಹೆಗಾರರನ್ನು ನೇಮಕ ಮಾಡಲಾಗಿದೆ.
ಇಂದು ಸಿಎಂ ಸಿದ್ದರಾಮಯ್ಯ ನಿಗಮ-ಮಂಡಳಿ ನೇಮಕ ಪಟ್ಟಿ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ. ಪಟ್ಟಿಯಲ್ಲಿ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಪಟ್ಟಿಯಿದ್ದು, ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಸಲಹೆಗಾರರಾಗಲಿದ್ದಾರೆ.
ಇದುವರೆಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತ್ರ ರಾಜಕೀಯ ಕಾರ್ಯದರ್ಶಿಗಳ ನೇಮಕವಾಗುತ್ತಿತ್ತು. ಹಾಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಎಂಎಲ್ ಸಿಗಳಾದ ನಸೀರ್ ಅಹಮದ್ ಮತ್ತು ಕೆ ಗೋವಿಂದರಾಜ್ ಅವರು ರಾಜಕೀಯ ಕಾರ್ಯದರ್ಶಿಗಳಾಗಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಗಳಿಗೂ ರಾಜಕೀಯ ಸಲಹೆಗಾರರನ್ನು ನೇಮಕ ಮಾಡಲಾಗಿದೆ.