ಬೆಂಗಳೂರು : ರಾಜ್ಯದ ಎಲ್ಲ ಪೊಲೀಸ್ ಠಾಣೆಗಳ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಭಾರತದಲ್ಲೇ ಮೊದಲ ಬಾರಿಗೆ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದ ಎಲ್ಲಾ ಪೊಲೀಸ್ ಠಾನೆಗಳ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಬೆಂಗಳೂರಿನ ಕೇಂದ್ರಿಕೃತ ಕಮಾಂಡ್ ಸೆಂಟರ್ ಮುಂದಿನ 3-4 ತಿಂಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ಎಂದು ಹೇಳಿದ್ದಾರೆ.
ಕಮಾಂಡ್ ಸೆಂಟರ್ ದೇಶದಲ್ಲೇ ಮೊದಲ ಯೋಜನೆಯಾಗಿದ್ದು, ರಾಜ್ಯದ ಎಲ್ಲ ಠಾಣೆಗಳ ಆಗುಹೋಗುಗಳು ಕಮಾಂಡ್ ಸೆಂಟರ್‌ನಡಿ ಬರಲಿದೆ. ಇದರಿಂದ ತಕ್ಷಣ ಕ್ರಮಕ್ಕೆ ಸಹಕಾರಿಯಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.