ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ವರ್ಷದ ಮೊದಲ ಬಲಿಯಾಗಿದ್ದು, 18 ವರ್ಷದ ಯುವತಿಯೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೊಪ್ಪನಮನೆ ಗ್ರಾಮದ ಯುವತಿ ಅನನ್ಯಾ (18) ಎಂದು ಗುರುತಿಸಲಾಗಿದೆ. ಮಂಗನ ಖಾಯಿಲೆಯಿಂದ ಬಳಲುತ್ತಿದ್ದ ಯುವತಿ ಅನನ್ಯಾ ಡಿ.21 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ಗ್ರಾಮದ ಜನರಲ್ಲಿ ಆತಂಕ ಶುರುವಾಗಿದೆ.