
ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ.
ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ. ಮಹಿಳೆಯ ಕಪಾಳಕ್ಕೆ ಬಾರಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಲಕ್ಷ್ಮೀ ಬಾಯಿ ಎಂಬ ಮಹಿಳೆ ಹಲ್ಲೆಗೊಳಗಾದವರು. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಂದರ್, ಶಿಲ್ಪ ಹಾಗೂ ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ.