ಚೆನ್ನೈ: ತಮಿಳುನಾಡಿನ ಕೊಯಮತ್ತೂರ್ ಕಾರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅ.23ರಂದು ಕೊಯಮತ್ತೂರ್ ನ ಕೊಟ್ಟೈ ಈಶ್ವರನ್ ದೇವಸ್ಥಾನದ ಬಳಿ ಕಾರು ಸ್ಫೋಟಗೊಂಡು, ಓರ್ವ ಸಾವನ್ನಪ್ಪಿದ್ದರು. ಕೃತ್ಯದ ಹಿಂದೆ ಭಯೋತ್ಪಾದಕರ ಚಟುವಟಿಕೆ ಇರುವ ಬಗ್ಗೆ ಗೊತ್ತಾಗಿದ್ದು, ಇದೀಗ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರಿನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 25 ವರ್ಷದ ಜಮೇಜಾ ಮುಬಿನ್ ಎಂಬುವವರು ಸಾವನ್ನಪ್ಪಿದ್ದರು.
ಈ ಹಿಂದೆ ಇವರನ್ನು ಪ್ರಕರಣವೊಂದರಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಇದೀಗ ಸಿಲಿಂಡರ್ ಸ್ಫೋಟ ಸಂಬಂಧ ಪೊಲೀಸರು ತನಿಖೆ ನಡೆಸಿದಾಗ ಜಮೇಜಾ ನಿವಾಸದಲ್ಲಿ ಹಲವು ಸ್ಫೋಟಕಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಘಟನೆ ಹಿಂದೆ ಉಗ್ರರ ನಂಟಿದೆ ಎಂದು ಹೇಳಲಾಗುತ್ತಿದೆ.