ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಶನಿವಾರದಂದು ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಿಂದ ಸ್ಕಿಡ್ ಆದ ಕಾರ್ ಒಂದು ಆಳವಾದ ಕಮರಿಗೆ ಬಿದ್ದ ಕಾರಣ, ವಾಹನದಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ದುರ್ದೈವಿಗಳು ಎಸ್‌ಯುವಿ ಕಾರಿನಲ್ಲಿ, ಪಂಜಾಬ್‌ನಿಂದ ಶ್ರೀನಗರಕ್ಕೆ ತೆರಳುತ್ತಿದ್ದರು. ಈ ವೇಳೆ ಮನ್ಸಾರ್ ಸಮೀಪದ ಜಮೋದಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರು ಜನರನ್ನು ಹೊತ್ತೊಯ್ಯುತ್ತಿದ್ದ ಎಸ್‌ಯುವಿ ಕಾರು, ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದೆ. ರಕ್ಷಣಾ ತಂಡವು, ಐದು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಅದೃಷ್ಟವಶಾತ್ ಒಬ್ಬರು ಬದುಕುಳಿದಿದ್ದಾರೆ, ಆದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.