ಕಲಬುರ್ಗಿ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪುರ ಹೊರವಲಯದಲ್ಲಿ ಸಂಭವಿಸಿದೆ.
ಕಾರಿನ ಚಾಲಕ ಹಾಗೂ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗಾಣಗಾಪುರ ದತ್ತಾತ್ರೇಯ ದೇಗುಲದಿಂದ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
BIG NEWS: ಸಾಹಿಬಾಬಾದ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ; ಗೆಲುವಿನ ನಗೆ ಬೀರಿದ ಸುನಿಲ್ ಕುಮಾರ್ ಶರ್ಮ
ಅಫಜಲಪುರ ಮಾರ್ಗವಾಗಿ ಮಹಾರಾಷ್ಟ್ರ ಕಡೆಗೆ ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.