alex Certify ಯೂನಿವರಸಲ್ ತಲಾ ಆದಾಯ ಪರಿಕಲ್ಪನೆಯಲ್ಲಿ ಪಂಚ ಗ್ಯಾರಂಟಿ ಜಾರಿ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯೂನಿವರಸಲ್ ತಲಾ ಆದಾಯ ಪರಿಕಲ್ಪನೆಯಲ್ಲಿ ಪಂಚ ಗ್ಯಾರಂಟಿ ಜಾರಿ : ಸಿಎಂ ಸಿದ್ದರಾಮಯ್ಯ

ಕಲಬುರಗಿ : ಬೆಲೆ ಏರಿಕೆ, ನಿರುದ್ಯೋಗ ಮತ್ತಿತರ ಸಮಸ್ಯೆಗಳ ಸರಮಾಲೆಯಿಂದ ತತ್ತರಿಸಿದ ನಾಡಿನ ಜನತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಯೂನಿವರಸಲ್ ತಲಾ ಆದಾಯ ಪರಿಕಲ್ಪನೆಯಡಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರ ಖರೀದಿಯ ಶಕ್ತಿ ಹೆಚ್ಚಾದರೆ ಆರ್ಥಿಕತೆಯು ಉತ್ತಮಗೊಳ್ಳುತ್ತದೆ. ಇದನ್ನು ಈಗಾಗಲೇ ಜಾರಿಗೊಂಡಿರುವ ನಮ್ಮ ಗ್ಯಾರಂಟಿ ಯೋಜನೆಗಳು ಸಾಬೀತುಪಡಿಸಿವೆ. ಇದು ಕರ್ನಾಟಕ ಮಾದರಿ ಆಡಳಿತದ ಪರಿ ಎಂದರು.

“ಶಕ್ತಿ” ಯೋಜನೆಯಡಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸಪ್ಟೆಂಬರ್ 5ರ ವರೆಗೆ ದಿನನಿತ್ಯ 6.75 ಲಕ್ಷದಂತೆ 587.36 ಲಕ್ಷ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. “ಅನ್ನ ಭಾಗ್ಯ” ಯೋಜನೆಯಡಿ ಆಗಸ್ಟ್-2023 ಮಾಹೆಗೆ 20,44,691 ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳ 76,54,686 ಫಲಾನುಭವಿಗಳು ಇದಕ್ಕಾಗಿ ಅರ್ಹರಿದ್ದು, 124.92 ಕೋಟಿ ರೂ.ಗಳ ಪೈಕಿ 119.50 ಕೋಟಿ ರೂ. ಪಾವತಿಸಿದೆ.  “ಗೃಹ ಜ್ಯೋತಿ”ಯೋಜನೆಯಡಿ ಆಗಸ್ಟ್ 28ರ ವರೆಗೆ ಜೆಸ್ಕಾಂ ವ್ಯಾಪ್ತಿಯಲ್ಲಿ 20,38,245 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 18,80,286 ಗ್ರಾಹಕರು ಯೋಜನೆಯ ಲಾಭ ಪಡೆದಿದ್ದಾರೆ. ಮಾಸಿಕ 2,000 ರೂ. ಒದಗಿಸುವ “ಗೃಹ ಲಕ್ಷ್ಮಿ” ಯೋಜನೆಯಡಿ  ಕಲಬುರಗಿ ವಿಭಾಗದ 7 ಜಿಲ್ಲೆಗಳಲ್ಲಿ ಆಗಸ್ಟ್-2023ರ ಮಾಹೆಯ ಅಂತ್ಯದ ವರೆಗೆ ನೊಂದಾಯಿಸಿದ 20,89,653 ಫಲಾನುಭವಿಗಳ ಪೈಕಿ 19,44,015 ಮಹಿಳೆಯರಿಗೆ ತಲಾ 2,000 ರೂ. ಹಣ ಡಿ.ಬಿ.ಟಿ. ಮೂಲಕ ಪಾವತಿಸಿದೆ. ನಿರುದ್ಯೋಗಿಗಳಿಗೆ ಮಾಸಿಕ 1,500 ಮತ್ತು 3,000 ಭತ್ಯೆ ನೀಡುವ “ಯುವ ನಿಧಿ” ಯೋಜನೆ ಈ ವರ್ಷದ ಅಂತ್ಯದೊಳಗೆ ಜಾರಿಗೆ ತರಲಾಗುತ್ತದೆ.

ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48 ರಿಂದ 60 ಸಾವಿರ ರೂ. ಸೌಲಭ್ಯ ಲಭಿಸಲಿದೆ. ಸರ್ವರನ್ನು ಒಳಗೊಂಡ ಆರ್ಥಿಕ ಸ್ಥಿರತೆ ಮತ್ತು ಸಾಮಾಜಿಕ ಪ್ರಗತಿಪರ ಅಭಿವೃದ್ಧಿಗೆ ಮತ್ತು “ಸರ್ವೋದಯ ಸಮಾಜ” ನಿರ್ಮಾಣಕ್ಕೆ ಪಂಚ ಗ್ಯಾರಂಟಿ ಯೋಜನೆಗಳು ಪೂರಕವಾಗಿದೆ. ಇದುವೇ ಕರ್ನಾಟಕ ಮಾದರಿ ಆಡಳಿತದ ಪರಿಯಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ವಿವರಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...