![](https://kannadadunia.com/wp-content/uploads/2023/01/accident.1.38550.jpg)
ಬಳ್ಳಾರಿ : ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬಳ್ಳಾರಿ ಮೂಲದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ತೆಲಂಗಾಣದ ಮೆಹಬೂಬ್ ನಗರ ಜಿಲೆಲಯ ಕೊಕೋಟ ಬೈಪಾಸ್ ನ ತೆಕ್ಕಲಯ್ಯ ದರ್ಗಾ ಬಳಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬಳ್ಳಾರಿ ಮೂಲದ ಐವರು ಸಾವನ್ನಪ್ಪಿದ್ದಾರೆ.
ಮೃತರನ್ನು ಬಳ್ಳಾರಿಯ ಬಸವನಕುಂಟೆಯ ನಿವಾಸಿಗಳಾದ ಅಬ್ದುಲ್ ರೆಹಮಾನ್, ಫಾತಿಮಾ, ವಾಸಿ, ಬುಸ್ರಾ, ಮಾರಿಯಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.