ಆಗ್ರಾ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ. ಆಗ್ರಾದ ಗುರುದ್ವಾರ ಗುರು ಕಾ ತಾಲ್ ಕ್ರಾಸಿಂಗ್ ಬಳಿ ವೇಗವಾಗಿ ಬಂದ ಟ್ರಕ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಪ್ರಾಥಮಿಕ ವರದಿಗಳ ಪ್ರಕಾರ ಮೃತ ಐವರು ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಅಪಘಾತದ ಪರಿಣಾಮ ಆಟೋ ರಿಕ್ಷಾ ಎರಡು ಲಾರಿಗಳ ನಡುವೆ ಸಿಲುಕಿಕೊಂಡಿದೆ.
ಗುರುದ್ವಾರ ಗುರು ಕಾ ತಾಲ್ ಕ್ರಾಸಿಂಗ್ ಇಂತಹ ಮಾರಣಾಂತಿಕ ಅಪಘಾತಗಳಿಗೆ ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ಅಂಡರ್ಪಾಸ್ ನಿರ್ಮಿಸುವಂತೆ ಸ್ಥಳೀಯರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರೂ ಈಡೇರಿಲ್ಲ. ಮೃತ ಐವರು ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ.
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 19 ರಲ್ಲಿ ಕಿಕ್ಕಿರಿದು ಜನ ಸೇರಿದ್ದರಿಂದ ವಾಹನಗಳು ನಿಂತ ಕಾರಣ ಭಾರಿ ಟ್ರಾಫಿಕ್ ಜಾಮ್ ಆಗಿದೆ. ಪೊಲೀಸರು ಸುಗಮ ಸಂಚಾರಕ್ಕೆ ಕ್ರಮಕೈಗೊಂಡಿದ್ದಾರೆ.