ಟ್ರ್ಯಾಕ್ಟರ್ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸಾವು

ಲಖನೌ: ಅಹಿರೌಲಾ ಪ್ರದೇಶದ ಪೂರ್ವಾಂಚಲ ಎಕ್ಸ್‌ ಪ್ರೆಸ್‌ವೇ ಯಲ್ಲಿ ಎಸ್‌ಯುವಿ -ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಲಕ್ನೋದಿಂದ ಗಾಜಿಪುರಕ್ಕೆ ತೆರಳುತ್ತಿದ್ದ ಎಸ್‌ಯುವಿ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಐವರು ಸ್ಥಳದಲ್ಲೇ ಮೃತಪಟ್ಟರೆ, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ. ಮೃತರೆಲ್ಲರೂ ಡಿಯೋರಿಯಾ ಜಿಲ್ಲೆಯ ನಿವಾಸಿಗಳು. ಈ ಕುರಿತು ತನಿಖೆ ಮುಂದುವರಿದಿದ್ದು, ಟ್ರ್ಯಾಕ್ಟರ್‌ನ ಆರೋಪಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಎಎಸ್‌ಪಿ) ಶೈಲೇಂದ್ರ ಲಾಲ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read