alex Certify ಕಾರ್ –ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ವಿದ್ಯಾರ್ಥಿಗಳು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ –ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ವಿದ್ಯಾರ್ಥಿಗಳು ಸಾವು

ತಿರುವಳ್ಳೂರು: ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವಳ್ಳೂರಿನ ತಿರುತ್ತಣಿ ಸಮೀಪ ಭೀಕರ ಅಪಘಾತ ಸಂಭವಿಸಿದೆ.

ಲಾರಿಗೆ ಕಾರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಿರುವಳ್ಳೂರು ಜಿಲ್ಲೆಯ ತಿರುಟ್ಟಣಿ ಬಳಿ ಈ ಘಟನೆ ನಡೆದಿದೆ.

ಸಂತ್ರಸ್ತರನ್ನು ಖಾಸಗಿ ವಿಶ್ವವಿದ್ಯಾಲಯಕ್ಕೆ ಸೇರಿದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಕೆಕೆ ಛತ್ರಂ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...