ಐದು ಬಾರಿ ಒಲಿಂಪಿಕ್ ಪದಕ ಗೆದ್ದಿದ್ದ ಸೈಕ್ಲಿಸ್ಟ್, ಡೇನಿಯಲಾ ಲಾರಿಯಲ್ ಚಿರಿನೋಸ್ ಶವವಾಗಿ ಪತ್ತೆಯಾಗಿದ್ದಾರೆ. ಲಾಸ್ ವೇಗಾಸ್ ಅಪಾರ್ಟ್ಮೆಂಟ್ ನಲ್ಲಿ ಅವರ ಶವ ಸಿಕ್ಕಿದೆ. ಆಹಾರವು ಅವರ ಶ್ವಾಸನಾಳದಲ್ಲಿ ಸಿಲುಕಿಕೊಂಡಿದ್ದು, ಉಸಿರುಗಟ್ಟಿ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು.
ವರದಿಗಳ ಪ್ರಕಾರ, ಒಲಿಂಪಿಕ್ ಸೈಕ್ಲಿಸ್ಟ್ ಡೇನಿಯೆಲಾ ಲಾರಿಯಲ್ ಚಿರಿನೋಸ್ ಕೊನೆಯ ಬಾರಿಗೆ ಲಂಡನ್ ಒಲಿಂಪಿಕ್ಸ್ 2012 ರಲ್ಲಿ ಭಾಗವಹಿಸಿದ್ದರು. ಆಗಸ್ಟ್ 12 ರಿಂದ ನಾಪತ್ತೆಯಾಗಿದ್ದರು. ಲಾಸ್ ವೇಗಾಸ್ ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆ ಮತ್ತು ಕ್ಲಾರ್ಕ್ ಕೌಂಟಿ ಕರೋನರ್ ಕಚೇರಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಯಾವುದೇ ಹೇಳಿಕೆಯನ್ನು ನೀಡಿಲ್ಲ.
ವೆನೆಜುವೆಲಾದ ಒಲಿಂಪಿಕ್ ಸಮಿತಿಯು ಸಾಮಾಜಿಕ ಮಾಧ್ಯಮದಲ್ಲಿ ಡೇನಿಯಲಾ ಲಾರಿಯಲ್ ಚಿರಿನೋಸ್ ಸಾವಿನ ಸುದ್ದಿಯನ್ನು ದೃಢಪಡಿಸಿದೆ. ಅವರು ಟ್ರ್ಯಾಕ್ ಸೈಕ್ಲಿಂಗ್‌ನಲ್ಲಿ ಅತ್ಯುತ್ತಮ ದಾಖಲೆಯನ್ನು ಹೊಂದಿದ್ದಾರೆ. ಅವರು 5 ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಾರೆ. ಅವರು ನಮಗೆ ಅನೇಕ ಸ್ಮರಣೀಯ ಕ್ಷಣಗಳನ್ನು ನೀಡಿದ್ದಾರೆ ಎಂದು ಪೋಸ್ಟ್ ಹಂಚಿಕೊಳ್ಳಲಾಗಿದೆ.