ತೆಲಂಗಾಣದ ಮೂರನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರ ಹೆಸರು ಅಂತಿಮಗೊಳಿಸಲಾಗಿದೆ ಎನ್ನಲಾಗಿದ್ದು, ಇಂದು ಸಂಜೆ 7 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ತೆಲಂಗಾಣದಲ್ಲಿ ಒಟ್ಟು 64 ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಅವರ ಪೈಕಿ 50 ಕ್ಕೂ ಹೆಚ್ಚು ಶಾಸಕರು ರೇವಂತ್ ರೆಡ್ಡಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ
ಹೌದು, ಇಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆದಿದ್ದು, ಈ ಸಭೆಯಲ್ಲಿ ರೆಡ್ಡಿ ಹೆಸರನ್ನು ಸಿಎಂ ಸ್ಥಾನಕ್ಕೆ ಸೂಚಿಸಲಾಗಿದೆ. ಇಂದು ರಾತ್ರಿ ರಾತ್ರಿ 8 ಗಂಟೆಗೆ ತೆಲಂಗಾಣ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸಲಿದ್ದು, ತೆಲಂಗಾಣ ರಾಜಭವನದಲ್ಲಿ ಪ್ರಮಾಣವಚನ ಸಮಾರಂಭಕ್ಕೆ ಸಿದ್ಧತೆ ನಡೆದಿದೆ.
ಮುಂದಿನ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಭಟ್ಟಿ ವಿಕ್ರಮಾರ್ಕ ಉಪ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ. ರೇವಂತ್ ಅವರನ್ನ ಏಕಪಕ್ಷೀಯವಾಗಿ ಅಂತಿಮಗೊಳಿಸಿ ಎಐಸಿಸಿಗೆ ಕಳುಹಿಸಿದ್ದರಿಂದ ಹೈಕಮಾಂಡ್ ಕೂಡ ರೇವಂತ್ ಪರವಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೈಕಮಾಂಡ್ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಿದೆ.