ಬೆಂಗಳೂರು: ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ.
25 ಮಂದಿ ಸಚಿವರು ಉಸ್ತುವಾರಿ ವಹಿಸಿಕೊಂಡಿರುವ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಚಿವ ಕೆ. ಗೋಪಾಲಯ್ಯ ಅವರಿಗೆ ಮಂಡ್ಯ ಮತ್ತು ಹಾಸನ ಜಿಲ್ಲೆ ಉಸ್ತುವಾರಿ ಇದ್ದು, ಅವರು ಹಾಸನದಲ್ಲಿ ಧ್ವಜಾರೋಹಣ ನೆರವೇರಿಸುವರು. ಸಚಿವ ಆರ್. ಅಶೋಕ್ ಅವರು ಮಂಡ್ಯದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ,
ವಿಜಯಪುರ, ಗದಗ, ಬೀದರ್, ಚಿಕ್ಕಮಗಳೂರಿನಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ. ಅನಾರೋಗ್ಯ, ಇತರೆ ಕಾರಣಗಳಿಂದ ಸಚಿವರು ಅನುಪಸ್ಥಿತರಾದಲ್ಲಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ನೆರವೇರಿಸುವಂತೆ ನಿರ್ದೇಶನ ನೀಡಲಾಗಿದೆ.
ಈ ಮೂಲಕ ನವೆಂಬರ್ 1 ರ ಕನ್ನಡ ರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳನ್ನು ಧ್ವಜಾರೋಹಣ ನೆರವೇರಿಸಲು ನೇಮಿಸಲಾಗಿದೆ.