
ಮುಂಬೈ: ಮುಂಬೈನಲ್ಲಿ ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆ ಆರಂಭವಾಗಿದ್ದು, ಸುಮಾರು 3 ಕಿ.ಮೀ ವಿಜಯೋತ್ಸವ ಮೆರವಣಿಗೆ ಸಾಗಲಿದೆ.
ವಿಜಯೋತ್ಸವ ಮೆರವಣಿಗೆಯ ನಂತರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ತಂಡದ ಆಟಗಾರರಿಗೆ ಸನ್ಮಾನ, ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಟಿ20 ವಿಶ್ವಕಪ್ ಗೆದ್ದು ಬಂದ ಟೀಂ ಇಂಡಿಯಾ ಆಟಗಾರರಿಗೆ 125 ಕೋಟಿ ರೂಪಾಯಿ ನಗದು ಬಹುಮಾನ ವಿತರಿಸಿ ಸನ್ಮಾನಿಸಲಾಗುವುದು.
ಲಕ್ಷಾಂತರ ಅಭಿಮಾನಿಗಳು ಮುಂಬೈನಲ್ಲಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಜಮಾವಣೆಗೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಸ್ಟೇಡಿಯಂವರೆಗೆ ರಸ್ತೆಯ ಎರಡು ಬದಿಯಲ್ಲಿ ಲಕ್ಷಾಂತರ ಅಭಿಮಾನಿಗಳು ಸೇರಿದ್ದು, ವಿಜಯೋತ್ಸವ ಮೆರವಣಿಗೆಯಲ್ಲಿ ಸಾಗಿದ ಆಟಗಾರರು ಸಂಭ್ರಮಿಸಿದ್ದಾರೆ.
ಇದಕ್ಕೂ ಮುನ್ನ ದೆಹಲಿಯಿಂದ ಹೊರಟು ಮುಂಬೈ ತಲುಪಿದ ಟೀಂ ಇಂಡಿಯಾ ಆಟಗಾರರಿಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಆಟಗಾರರನ್ನು ಹೊತ್ತು ತಂದ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನಕ್ಕೆ ವಾಟರ್ ಸೆಲ್ಯೂಟ್ ನೀಡಲಾಗಿದೆ.

