ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ) ತನ್ನ ಅಧಿಕೃತ ಜಾಲತಾಣದಲ್ಲಿ ಕನ್ನಡ ಭಾಷಾ ಆಯ್ಕೆಯನ್ನು ಪರಿಚಯಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಿದೆ. ಈ ಮೂಲಕ ವಿಮಾನಗಳ ಹಾರಾಟ, ಆಗಮನ, ನಿರ್ಗಮನ ಮತ್ತು ವಿಳಂಬಗಳ ಕುರಿತ ಮಾಹಿತಿಯನ್ನು ಕನ್ನಡದಲ್ಲೇ ಪಡೆಯಬಹುದು.
ಇದಲ್ಲದೆ, ವಿಮಾನಗಳನ್ನು ಕಾಯ್ದಿರಿಸಲು, ವಿಮಾನ ನಿಲ್ದಾಣದ ಸೌಲಭ್ಯಗಳು, ಭದ್ರತಾ ಕಾರ್ಯವಿಧಾನ, ಬ್ಯಾಗೇಜ್ ನಿಯಮಗಳು ಮತ್ತು ಪ್ರಯಾಣಕ್ಕೆ ಬೇಕಾದ ಇತರ ಅನುಕೂಲಕರ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಬಹುದು. ಇದು ಸ್ಥಳೀಯ ಭಾಷೆಯಲ್ಲಿ ಸಂವಹನ ಮಾಡಲು ಬಯಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವನ್ನು ನೀಡುತ್ತದೆ.
ವಿಮಾನ ನಿಲ್ದಾಣದಾದ್ಯಂತ ವಿಮಾನ ಮಾಹಿತಿ ಪ್ರದರ್ಶನ, ಸಾರ್ವಜನಿಕ ಪ್ರಕಟಣೆ, ಅಂಗಡಿ ಮತ್ತು ಮಳಿಗೆಗಳ ನಾಮಫಲಕ ಸೇರಿದಂತೆ ಎಲ್ಲೆಡೆ ಕನ್ನಡವನ್ನು ಅಳವಡಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣದ ಈ ಪ್ರಯತ್ನದಿಂದಾಗಿ ಪ್ರಯಾಣಿಕರಿಗೆ ಅನುಕೂಲವಾಗುವುದರ ಜೊತೆಗೆ, ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ದೊರೆತಂತಾಗಿದೆ.
ಐಪಿಎಲ್ ಪಂದ್ಯಗಳಿಗಾಗಿ ಮೆಟ್ರೋ ರೈಲು ಸೇವೆಯ ಅವಧಿಯನ್ನು ವಿಸ್ತರಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಹೋಗುವ ಮತ್ತು ಬರುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೆಟ್ರೋ ರೈಲು ಸೇವೆಯ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.