
ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟಸೀರೂರು ಗ್ರಾಮದ ಬಳಿ ತಾಂತ್ರಿಕ ದೋಷದಿಂದ ತರಬೇತಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಅದೃಷ್ಟವಶಾತ್ ವಿಮಾನದಲ್ಲಿದ್ದ ಪೈಲಟ್, ಟ್ರೈನಿ ಪೈಲಟ್ ಪಾರಾಗಿದ್ದಾರೆ. ವಿಮಾನ ಟೇಕ್ ಆಫ್ ಆದ 15 ನಿಮಿಷದ ನಂತರ ಎಂಜಿನ್ ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಕೂಡಲೇ ಪಕ್ಕದ ಜಮೀನಿನಲ್ಲಿ ಪೈಲಟ್ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ.