ನವದೆಹಲಿ: ತೆಲುಗು ದೇಶಂ ಪಕ್ಷದ(ಟಿಡಿಪಿ) ನಾಯಕ ಮತ್ತು ಆಂಧ್ರಪ್ರದೇಶದ ಶ್ರೀಕಾಕುಳಂನ ಲೋಕಸಭಾ ಸಂಸದ ರಾಮ್ ಮೋಹನ್ ನಾಯ್ಡು ಅವರು ಗುರುವಾರ ನಾಗರಿಕ ವಿಮಾನಯಾನದ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡರು.
36ರ ಹರೆಯದ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇತ್ತೀಚೆಗೆ ರಚನೆಯಾದ ಕೇಂದ್ರ ಸಂಪುಟದಲ್ಲಿ ಅತ್ಯಂತ ಕಿರಿಯ ಸಚಿವರಾಗಿದ್ದಾರೆ.
ವಿಮಾನ ಟಿಕೆಟ್ ದರ ಇಳಿಕೆ
ಹೊಸ ಸರ್ಕಾರವು ವಿಮಾನ ದರಗಳ ಏರಿಕೆಯನ್ನು ನಿಯಂತ್ರಿಸಲು ಯಾವುದೇ ಯೋಜನೆಯನ್ನು ಹೊಂದಿದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ, ವಿಮಾನ ಟಿಕೆಟ್ ದರಗಳನ್ನು ಕಡಿಮೆ ಮಾಡುವುದು ತಮ್ಮ ಆದ್ಯತೆಗಳಲ್ಲಿ ಒಂದಾಗಿದೆ ಎಂದು ನಾಯ್ಡು ಹೇಳಿದ್ದಾರೆ.
ಟಿಕೆಟ್ ದರ ಇಳಿಕೆ ಒಂದು ಪ್ರಮುಖ ವಿಷಯವಾಗಿದೆ. ನನ್ನ ಸಂಪೂರ್ಣ ಉದ್ದೇಶವು ಸಾಮಾನ್ಯ ಜನರಿಗೆ ವಿಮಾನ ಪ್ರಯಾಣವನ್ನು ಪ್ರವೇಶಿಸುವುದನ್ನು ಖಚಿತಪಡಿಸಿಕೊಳ್ಳುವುದಾಗಿದೆ. ಇದನ್ನು ಕಾರ್ಯಗತಗೊಳಿಸಲು ಬೆಲೆಗಳು ಕೈಗೆಟುಕುವಂತಿರಬೇಕು ಎಂದು ಸಚಿವರು ಹೇಳಿದ್ದಾರೆ.
ವಾಯುಯಾನ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಭಾರತವನ್ನು ಮುನ್ನಡೆಸಬೇಕೆಂದು ನಾವು ಬಯಸುತ್ತೇವೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನಾವು ನಾಗರಿಕ ವಿಮಾನಯಾನಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತೇವೆ. ಕ್ಯಾಬಿನೆಟ್‌ನ ಕಿರಿಯ ಸದಸ್ಯನಾದ ನನಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ. ನನಗೆ ಇಲ್ಲಿ ಸಾಮರ್ಥ್ಯ ಸಾಬೀತುಪಡಿಸಲು ಬಹಳಷ್ಟು ಅವಕಾಶ ಇದೆ ಎಂದು ತಿಳಿಸಿದ್ದಾರೆ.