alex Certify ಫ್ಲಿಪ್ಕಾರ್ಟ್ ಬಿಗ್ ದೀಪಾವಳಿ ಸೇಲ್ ನಲ್ಲಿ ಸಿಗ್ತಿದೆ ಭರ್ಜರಿ ರಿಯಾಯಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫ್ಲಿಪ್ಕಾರ್ಟ್ ಬಿಗ್ ದೀಪಾವಳಿ ಸೇಲ್ ನಲ್ಲಿ ಸಿಗ್ತಿದೆ ಭರ್ಜರಿ ರಿಯಾಯಿತಿ

ದೀಪಾವಳಿ ಹತ್ತಿರ ಬರ್ತಿದೆ. ಜನರು ಖರೀದಿ ಶುರು ಮಾಡಿದ್ದಾರೆ. ಕೊರೊನಾ ಗಮನದಲ್ಲಿಟ್ಟುಕೊಂಡು ಆನ್ಲೈನ್ ಶಾಪಿಂಗ್ ಮಾಡುವಂತೆ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಈ ಮಧ್ಯೆ ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ಮತ್ತೆ ಬಿಗ್ ದೀಪಾವಳಿ ಸೇಲ್ ಶುರು ಮಾಡ್ತಿದೆ.

ಫ್ಲಿಪ್‌ಕಾರ್ಟ್‌ನ ಬಿಗ್ ದೀಪಾವಳಿ ಸೇಲ್ ಅಕ್ಟೋಬರ್ 28 ರಿಂದ ಶುರುವಾಗಲಿದೆ. ಅಕ್ಟೋಬರ್ 28ರಿಂದ ನವೆಂಬರ್ 3 ರವರೆಗೆ ನಡೆಯಲಿದೆ. ಈ ಸೇಲ್ ಅಕ್ಟೋಬರ್ 27 ರ ಮಧ್ಯರಾತ್ರಿ 12 ಗಂಟೆಗೆ ಪ್ರಾರಂಭವಾಗಲಿದೆ.

ಮೊಬೈಲ್‌, ಟಿವಿ ಸೇರಿದಂತೆ ಅನೇಕ ಎಲೆಕ್ಟ್ರಾನಿಕ್ಸ್ ಐಟಂಗಳ ಮೇಲೆ ಭರ್ಜರಿ ರಿಯಾಯಿತಿ ಸಿಗಲಿದೆ. ಇಎಂಐ ಕೂಡ ಲಭ್ಯವಾಗಲಿದೆ. ಎಸ್ಬಿಐ ಕಾರ್ಡ್ ಬಳಸಿ ಶಾಪಿಂಗ್ ಮಾಡಿದ್ರೆ ಶೇಕಡಾ 10ರಷ್ಟು ಹೆಚ್ಚುವರಿ ರಿಯಾಯಿತಿ ಸಿಗಲಿದೆ. ಸ್ಮಾರ್ಟ್‌ಫೋನ್ ಮೇಲೆ ಶೇಕಡಾ 80ರಷ್ಟು ರಿಯಾಯಿತಿ ಸಿಗಲಿದೆ ಎಂದು ಫ್ಲಿಪ್ಕಾರ್ಟ್ ಹೇಳಿದೆ.

ಐಫೋನ್ 12 ಫೋನ್, 60,199 ರೂಪಾಯಿಗಳ ಬದಲಿಗೆ 45,199 ರೂಪಾಯಿಗೆ ಲಭ್ಯವಾಗಲಿದೆ. Oppo Reno 6 ಮೊಬೈಲ್ ಮೇಲೆ ಶೇಕಡಾ 15ರಷ್ಟು ರಿಯಾಯಿತಿ ಸಿಗಲಿದೆ. ಇದನ್ನು ಗ್ರಾಹಕರು 29,990 ರೂಪಾಯಿ ಆರಂಭಿಕ ಬೆಲೆಯಲ್ಲಿ ಖರೀದಿಸಬಹುದು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...