ಮಡಿಕೇರಿ : -ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹಾಗೆಯೇ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಜಲಾಶಯವು ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು.
ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ಅವರು ಕೋರಿದ್ದಾರೆ.