ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಮಿತಿಮೀರಿದೆ. ಮಹಾರಾಷ್ಟ್ರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದಾಗಿ ರಾಜ್ಯದ ಜಿಲ್ಲೆಗಳಿಗೂ ಸಂಕಷ್ಟ ಎದುರಾಗಿದೆ.
ಧಾರಾಕಾರ ಮಳೆಯಿಂದಾಗಿ ಭೀಮಾ ನದಿಯಲ್ಲಿ ಹೊರಹರಿವು ಹೆಚ್ಚಾಗಿದ್ದು, ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರೀ ಮಳೆಯಿಂದಾಗಿ ಸನ್ನತಿ ಬ್ಯಾರೇಜ್ನಿಂದ 13 ಸಾವಿರ ಕ್ಯೂಸೆಕ್ ನೀರನ್ನ ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಭೀಮಾ ನದಿಯಲ್ಲಿ ಹೊರಹರಿವು ಹೆಚ್ಚಾಗಿದ್ದು ಈಗಾಗಲೇ ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸರ್ವ ರೀತಿಯಲ್ಲೂ ಸಜ್ಜಾಗಿರುವ ಯಾದಗಿರಿ ಜಿಲ್ಲಾಡಳಿತ ನದಿಯ ಸಮೀಪ ಸಾರ್ವಜನಿಕರು ಹಾಗೂ ಜಾನುವಾರುಗಳು ಹೋಗದಂತೆ ಎಚ್ಚರಿಕೆ ವಹಿಸುತ್ತಿದೆ.