ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಗಾಗಿ ಪ್ರಮಾಣವಚನ ಸ್ವೀಕರಿಸಿದ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆ ನೇತೃತ್ವದ ನೂತನ ಸರ್ಕಾರದ ವಿಶ್ವಾಸ ಮತಯಾಚನೆ ಸೋಮವಾರ ನಡೆಯಲಿದೆ.
ಶಿವಸೇನೆಯ 39 ಮತ್ತು 10 ಪಕ್ಷೇತರರು ಹಾಗೂ ಬಿಜೆಪಿಯ 106 ಶಾಸಕರ ಬೆಂಬಲ ಹೊಂದಿರುವ ಏಕನಾಥ ಶಿಂದೆ ಸುಲಭವಾಗಿ ಬಹುಮತ ಸಾಬೀತುಪಡಿಸಲಿದ್ದಾರೆ. ಸ್ಪೀಕರ್ ಹುದ್ದೆಗೆ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ನಾಮಪತ್ರ ಸಲ್ಲಿಸಿದ್ದಾರೆ. ಭಾನುವಾರ ಸ್ಪೀಕರ್ ಚುನಾವಣೆ ನಡೆಯಲಿದ್ದು ಸೋಮವಾರ ವಿಶ್ವಾಸಮತಯಾಚನೆ ನಡೆಯಲಿದೆ.
155 ಕ್ಕೂ ಅಧಿಕ ಶಾಸಕರ ಬೆಂಬಲ ಹೊಂದಿರುವ ಶಿಂಧೆ ಸೋಮವಾರ ನಡೆಯಲಿರುವ ಅಗ್ನಿಪರೀಕ್ಷೆಯಲ್ಲಿ ಜಯಗಳಿಸುವುದು ನಿಶ್ಚಿತವಾಗಿದೆ.