
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ಹೂವು ಕೀಳಲು ಹೋಗಿ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಗೋವೇನಹಳ್ಳಿಯ ಸಿದ್ದಲಿಂಗಯ್ಯ(45) ಮೃತಪಟ್ಟವರು ಎಂದು ಹೇಳಲಾಗಿದೆ. ಹಬ್ಬಕ್ಕಾಗಿ ತಾವರೆ ಹೂವು ತರಲು ಕೆರೆಗೆ ಹೋಗಿದ್ದ ಸಂದರ್ಭದಲ್ಲಿ ಕೆರೆಯಲ್ಲಿ ಮುಳುಗಿ ಸಿದ್ದಲಿಂಗಯ್ಯ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರಗೆ ತೆಗೆದಿದ್ದಾರೆ. ದಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.