alex Certify BIG NEWS : ಬೆಂಗಳೂರಲ್ಲಿ ಇಂದು ‘ಫ್ಲವರ್ ಶೋ’ : ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಂಗಳೂರಲ್ಲಿ ಇಂದು ‘ಫ್ಲವರ್ ಶೋ’ : ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ.!

ಬೆಂಗಳೂರು : ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಆಯೋಜಿಸಲಾಗಿದ್ದು, ನಗರದ ಈ ಪ್ರದೇಶಗಳಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರಿನ ನಗರ ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ಲಾಲ್ಬಾಗ್ನಲ್ಲಿ “ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ” ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿರುತ್ತದೆ. ಈ ಫಲಪುಷ್ಪ ಪ್ರದರ್ಶನಕ್ಕೆ ಗಣ್ಯವ್ಯಕ್ತಿಗಳು, ಸಾರ್ವಜನಿಕರು, ಪ್ರವಾಸಿಗರು ದೇಶ-ವಿದೇಶಿ ಪ್ರೇಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳನ್ನೊಳಗೊಂಡಂತೆ ಸುಮಾರು 8 ರಿಂದ 10 ಲಕ್ಷ ಜನ ಆಗಮಿಸುವ ನಿರೀಕ್ಷೆ ಇದ್ದು, ವಿಲ್ಲನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗು ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ.

ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

ಡಾ|| ಮರಿಗೌಡ ರಸ್ತೆ. ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
ಕೆ.ಹೆಚ್.ರಸ್ತೆ, ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
ಡಾ|| ಮರಿಗೌಡ ರಸ್ತೆ-ಹಾಪ್ ಕಾಮ್ಸ್ ನಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ. .
ಜೆ.ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
* ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು:
ಡಾ: ಮರಿಗೌಡ ರಸ್ತೆ, ಲಾಲ್ ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ.
ಲಾಲ್ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್ಭಾಗ್ ಮುಖ್ಯದ್ವಾರದ ವರೆಗೆ
ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್ ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್ ವರೆಗೆ
ಬಿಟಿಎಸ್ ಬಸ್ ಸ್ಟಾಪ್ ಬಿಎಂಟಿಸಿ ಜಂಕ್ಷನ್ ನಿಂದ ಪೋಸ್ಟ್ ಆಫೀಸ್ ರಸ್ತೆಯ ಎರಡೂ ಬದಿಗಳಲ್ಲಿ.
ಕೃಂಬಿಗಲ್ ರಸ್ತೆಯ ಎರಡೂ ಕಡೆಗಳಲ್ಲಿ.
ಲಾಲ್ಬಾಗ್ ವೆಸ್ಟ್ಗೇಟ್ನಿಂದ ಆರ್.ವಿ. ಟೀಚರ್ಸ್ ಕಾಲೇಜ್ವರೆಗೆ.
ಆರ್ವಿ ಟೀಚರ್ಸ್ ಕಾಲೇಜ್ನಿಂದ ಅಶೋಕ ಪಿಲ್ಲರ್ ವರೆಗೆ
ಅಶೋಕ ಪಿಲ್ಲರ್ನಿಂದ ಸಿದ್ದಾಪುರ ಜಂಕ್ಷನ್ ವರೆಗೆ

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...