ಬೆಂಗಳೂರು: ಇಂದಿನಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ, ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಪ್ರಾರಂಭವಾಗಲಿದೆ.
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆ ವತಿಯಿಂದ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಲಾಲ್ ಬಾಗ್ ನ ಗಾಜಿನ ಮನೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ನೋಡುಗರನ್ನು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.
ಟಿಕೆಟ್ ದರ ಎಷ್ಟು..?
ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ಪ್ರವೇಶ ಟಿಕೆಟ್ ನಿಗದಿಪಡಿಸಲಾಗಿದೆ. ಹಿರಿಯರಿಗೆ 80 ರಿಂದ 100 ರೂ. ಇದ್ದು ಮಕ್ಕಳಿಗೆ 30 ರೂ. ನಿಗದಿಪಡಿಸಲಾಗಿದೆ. ಇನ್ನು ಶಾಲಾ ಸಮವಸ್ತ್ರ ತೊಟ್ಟು ಬರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶವಿದೆ. ಪ್ರವಾಸಿಗರ ಅನುಕೂಲಕ್ಕಾಗಿ ಲಾಲ್ಬಾಗ್ನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತಿದೆ.
ಈ ಬಾರಿ ಫಲಪುಷ್ಪ ಪ್ರದೇಶನಕ್ಕಾಗಿ 25 ಲಕ್ಷ ವಿವಿಧ ಬಗೆಯ ಹೂವುಗಳನ್ನು ಬಳಸಲಾಗಿದ್ದು, ಸಸ್ಯೋದ್ಯಾನ ಕಣ್ಮನಸೆಳೆಯುತ್ತಿದೆ. ಜನವರಿ 15ರಿಂದ ಆರಂಭವಾಗಲಿರುವ ಫಲಪುಷ್ಪ ಪ್ರದರ್ಶನ ಜನವರಿ 27ರವರೆಗೆ ನಡೆಯಲಿದೆ.