ಮಡಿಕೇರಿ : ಮಡಿಕೇರಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಕೆಎಸ್ಆರ್ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಎಂ.ಎಂ.ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ.
ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯರಾತ್ರಿ 2.30 ಗಂಟೆಗೆ ಹೊರಟು ಮಡಿಕೇರಿಗೆ ಬೆಳಗ್ಗೆ 7.30 ಗಂಟೆಗೆ ತಲುಪಲಿದೆ.
ನಂತರ ಬೆಳಗ್ಗೆ 11.30 ಗಂಟೆಗೆ ಮಡಿಕೇರಿಯಿಂದ ಹೊರಟು ಸಂಜೆ 6 ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಕೆಎಸ್ಆರ್ಟಿಸಿ ಬೆಂಗಳೂರು ಕೇಂದ್ರ ವಿಭಾಗದ ನಾಲ್ಕನೇ ಘಟಕದಿಂದ ಪ್ಲೈ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ.