
ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಫ್ಲೈಓವರ್ ನಿಂದ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಲ್ಲಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಬೈಕ್ ಗೆ ಡಿಕ್ಕಿ ಹೊಡೆದ ಕಾರ್ ನಿಯಂತ್ರಣ ತಪ್ಪಿ ಫ್ಲೈಓವರ್ ತುತ್ತತುದಿಗೆ ಬಂದು ನಿಂತಿದ್ದು, ಕಾರ್ ಭಾರೀ ವೇಗವಾಗಿದ್ದ ಕಾರಣ ರಭಸದಲ್ಲಿ ಅದರಲ್ಲಿದ್ದವರು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಅವರ ದೇಹಗಳು ಛಿದ್ರವಾಗಿವೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ದೌಡಾಯಿಸಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.