ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಟಿ ನಡೆಸಲಿದ್ದು, ಈ ಸಂದರ್ಭದಲ್ಲಿ ಮಹತ್ವದ ಘೋಷಣೆ ಮಾಡುವ ಸಾಧ್ಯತೆಯಿದೆ.
ಕೊರೊನಾ ಎರಡನೇ ಅಲೆ ದೇಶದಾದ್ಯಂತ ಆರ್ಭಟ ನಡೆಸಿದ್ದು, ಇದರ ನಿಯಂತ್ರಣಕ್ಕಾಗಿ ಬಹುತೇಕ ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಇದರ ಪರಿಣಾಮ ದೇಶದ ಆರ್ಥಿಕ ಪರಿಸ್ಥಿತಿ ಮೇಲೆ ತೀವ್ರ ಪರಿಣಾಮ ಬೀರಿದೆ.
ಜೊತೆಗೆ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯೂ ಮುಗಿಲು ಮುಟ್ಟಿರುವ ಕಾರಣ ಅಗತ್ಯ ವಸ್ತುಗಳ ಬೆಲೆ ಆಕಾಶಕ್ಕೆ ಏರಿಕೆ. ಇದೆಲ್ಲದರ ನಡುವೆ ಇಂದು ನಡೆಯುತ್ತಿರುವ ಹಣಕಾಸು ಸಚಿವರ ಪತ್ರಿಕಾಗೋಷ್ಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.