alex Certify ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಿ : ಸಂಸದ ಪ್ರತಾಪ್ ಸಿಂಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಿ : ಸಂಸದ ಪ್ರತಾಪ್ ಸಿಂಹ

ಮಡಿಕೇರಿ : ಈ ಬಾರಿ ಬರ ಇರುವ ಕಾರಣ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ಸಂಸದರಾದ ಪ್ರತಾಪ್ ಸಿಂಹ ಅವರು ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊಡಗು ಜಿಲ್ಲೆಯ 5 ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳಿಗೆ ಮೇವು ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.

ಈ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಬರ ನಿರ್ವಹಣೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 35 ಕೋಟಿ ರೂ. ಇದ್ದು, ಇತ್ತೀಚೆಗೆ ಸರ್ಕಾರ 7.50 ಕೋಟಿ ರೂ. ಬಿಡುಗಡೆ ಮಾಡಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸಲಾಗುವುದು. ಹಾಗೆಯೇ ಬರ ನಿರ್ವಹಣೆ ಸಂಬಂಧಿಸಿದಂತೆ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕೇಂದ್ರ ಪುರಸ್ಕ್ರತ 42 ಯೋಜನೆಗಳಿದ್ದು, ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸಾರ್ವಜನರಿಗೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಇರಬೇಕು. ಜೊತೆಗೆ ಕಾರ್ಯಕ್ರಮಗಳನ್ನು ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಸಂಸದರಾದ ಪ್ರತಾಪ್ ಸಿಂಹ ಅವರು ನಿರ್ದೇಶನ ನೀಡಿದರು.

ಪ್ರಧಾನಮಂತ್ರಿ ಗ್ರಾಮ ಸಡಕ್ ರಸ್ತೆಗಳು ಸೇರಿದಂತೆ ಕೇಂದ್ರ ಪುರಸ್ಕøತ ಯೋಜನೆಗಳ ರಸ್ತೆಗಳು, ಚರಂಡಿ, ಸ್ವಚ್ಛ ಭಾರತ ಅಭಿಯಾನ, ಬ್ಯಾಂಕ್ಗಳ ಹಲವು ಕಾರ್ಯಕ್ರಮಗಳು, ಉಜ್ವಲ ಯೋಜನೆ, ಜಲಜೀವನ್ ಮಿಷನ್ ಯೋಜನೆ ಹೀಗೆ ಹಲವು ಯೋಜನೆಗಳನ್ನು ತಲುಪಿಸುವಂತೆ ಸಂಸದರು ಹೇಳಿದರು.

ಸ್ವಚ್ಛ ಭಾರತ ಅಭಿಯಾನದಡಿ ಪ್ರತೀ ಗ್ರಾ.ಪಂ.ಗೆ ಕಸ ವಿಲೇವಾರಿಗಾಗಿ ವಾಹನ ಒದಗಿಸಲಾಗಿದೆ. ನಗರ, ಪಟ್ಟಣ, ಗ್ರಾಮೀಣ ಪ್ರದೇಶದಲ್ಲಿಯೂ ಸಹ ಸ್ವಚ್ಛತೆಯತ್ತ ಗಮನಹರಿಸುವಂತೆ ತಾ.ಪಂ.ಇಒಗಳಿಗೆ ಪ್ರತಾಪ್ ಸಿಂಹ ಅವರು ನಿರ್ದೇಶನ ನೀಡಿದರು.ಕೊಡಗು ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ದೂರುಗಳು ಕೇಳಿ ಬರುತ್ತಿದ್ದು, ಜಿಲ್ಲೆಯ ಪ್ರತೀ ಕುಟುಂಬಕ್ಕೂ ಜಲ ಮೂಲವನ್ನು ಬಳಸಿಕೊಂಡು ನಲ್ಲಿ ನೀರು ಸಂಪರ್ಕ ಒದಗಿಸಬೇಕು ಎಂದು ಸಂಸದರು ಸೂಚಿಸಿದರು.

ಕಾವೇರಿ ನದಿ ಹುಟ್ಟುವ ಕೊಡಗು ಜಿಲ್ಲೆಯಲ್ಲಿ ದೀಪದ ಕೆಳಗೆ ಕತ್ತಲು ಎನ್ನುವಂತಾಗಬಾರದು. ಕೊಡಗು ಜಿಲ್ಲೆಯ ಎಲ್ಲಾ ಕುಟುಂಬಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಗಾಳಿಬೀಡು ಬಳಿ ಇರುವ ನವೋದಯ ಶಾಲೆಗೂ ಸಹ ಕುಡಿಯುವ ನೀರು ಸಂಪರ್ಕ ಒದಗಿಸುವಂತೆ ಇದೇ ಸಂದರ್ಭದಲ್ಲಿ ಸಂಸದರು ನಿರ್ದೇಶನ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರು ಕೊಡಗು ಜಿಲ್ಲೆಯ ಪ್ರವಾಸಿ ಕೇಂದ್ರಗಳಲ್ಲಿ ಕಸ ವಿಲೇವಾರಿ ಸಂಬಂಧಿಸಿದಂತೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ಬಗ್ಗೆ ಪ್ರವಾಸಿಗರಿಗೂ ಸಹ ಅರಿವು ಮೂಡಿಸಬೇಕು ಎಂದರು.
ಹಾಗೆಯೇ ಜಲ ಜೀವನ್ ಅಭಿಯಾನ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸುಜಾಕುಶಾಲಪ್ಪ ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಗಮನಕ್ಕೆ ತಂದಾಗ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ಮಾಡಿದರು.

ರಸ್ತೆ, ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ ಸಂಬಂಧಿಸಿದಂತೆ ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ತಾ.ಪಂ.ಇಒಗಳಾದ ಶೇಖರ್, ಜಯಣ್ಣ, ಅಪ್ಪಣ್ಣ ಅವರು ಮಾಹಿತಿ ನೀಡಿದರು.‘ಸರ್ಕಾರ 2022-23 ನೇ ಸಾಲಿನಲ್ಲಿ ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ 10 ಕೋಟಿ ರೂ. ಅನುದಾನವನ್ನು ಒದಗಿಸಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಗೆ 10 ಕೋಟಿ ರೂ. ಬಿಡುಗಡೆ ಮಾಡಿದೆ. ಈ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕಿದೆ ಎಂದು ಹೇಳಿದರು.’ ಇದರಲ್ಲಿ ಕೊಡವ ಜನಾಂಗದ ಶ್ರೇಯೋಭಿವೃದ್ಧಿಗೆ ಹಲವು ಕಾರ್ಯ ಕೈಗೊಳ್ಳಬೇಕಿದೆ ಎಂದರು.

ಸಾರ್ವಜನಿಕರ ಬೇಡಿಕೆಗೆ ತಕ್ಕಂತೆ ಕೊಡಗು ಜಿಲ್ಲೆಯ 63 ಕಡೆಗಳಲ್ಲಿ ಬಿಎಸ್ಎನ್ಎಲ್ ಟವರ್ ನಿರ್ಮಿಸಲು ಅನುಮೋದನೆ ದೊರೆತಿದೆ. ಆ ನಿಟ್ಟಿನಲ್ಲಿ ನಾಗರಹೊಳೆ ಸೇರಿದಂತೆ ವಿವಿಧ ಅರಣ್ಯ ಪ್ರದೇಶಗಳಲ್ಲಿಯೂ ಸಹ ಟವರ್ ನಿರ್ಮಾಣಕ್ಕೆ ಸಹಕರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಂಸದರಾದ ಪ್ರತಾಪ್ ಸಿಂಹ ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಟವರ್ ನಿರ್ಮಾಣ ಸಂಬಂಧ ತಿರಸ್ಕøತಗೊಂಡಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳು ಮತ್ತು ಬಿಎಸ್ಎನ್ಎಲ್ ಅವರೊಂದಿಗೆ ಚರ್ಚಿಸಿ ಬಗೆ ಹರಿಸಿಕೊಳ್ಳುವಂತೆ ಹೇಳಿದರು.

ಸಂಸದರಾದ ಪ್ರತಾಪ್ ಸಿಂಹ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಈಗಾಗಲೇ 20 ಟವರ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯರೊಬ್ಬರು ತಿತಿಮತಿ ವ್ಯಾಪ್ತಿಯ ಚೈನಿಹಡ್ಲು ಹಾಡಿಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಎಂದು ಅವರು ಸಭೆಯ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಮಾತನಾಡಿದ ನಾಗರಹೊಳೆ ಹುಲಿ ಯೋಜನಾ ವ್ಯಾಪ್ತಿಯ ನಿರ್ದೇಶಕರಾದ ಹರ್ಷಕುಮಾರ್ ಅವರು ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮುಂಚಿತವಾಗಿ ತಿಳಿಸಿದಲ್ಲಿ ಪರಿಶೀಲಿಸಿ ಅನುಮತಿ ನೀಡಲಾಗುವುದು. ಅದು ಬಿಟ್ಟು ಕೆಲಸ ಆರಂಭಿಸುವ ಸಂದರ್ಭದಲ್ಲಿ ಗಮನಕ್ಕೆ ತರುತ್ತಾರೆ ಎಂದು ಅವರು ಹೇಳಿದರು.ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಸದರಾದ ಪ್ರತಾಪ್ ಸಿಂಹ ಅವರು ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗೆ ಸೂಚಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ಕೊಡಗು ಜಿಲ್ಲೆಯಲ್ಲಿ ಸುಮಾರು 9,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, 838 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಮಾಹಿತಿ ನೀಡಿದರು.ಕಾಫಿ ಮಂಡಳಿ ಉಪ ನಿರ್ದೇಶಕರಾದ ಚಂದ್ರಶೇಖರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ ಅವರು ಬೆಳೆ ಹಾನಿ ಬಗ್ಗೆ ಹಲವು ಮಾಹಿತಿ ನೀಡಿದರು.

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯರೊಬ್ಬರು ತೋಟಗಾರಿಕೆ ಇಲಾಖೆಯಿಂದ ನೀಡಲಾಗುವ ‘ಸಸಿ’ ವಿತರಣೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಹೆಚ್ಚಿನ ಮಾಹಿತಿ ನೀಡುವುದರ ಜೊತೆಗೆ ಗಿಡಗಳನ್ನು ವಿತರಿಸುವಂತಾಗಬೇಕು ಎಂದು ಹೇಳಿದರು.

ಈ ಕುರಿತು ಮಾತನಾಡಿದ ಸಂಸದರಾದ ಪ್ರತಾಪ್ ಸಿಂಹ ಅವರು ತೋಟಗಾರಿಕೆಯಿಂದ ನೀಡಲಾಗುವ ಸಸಿಗಳ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಬೇಕು. ಪಾರದರ್ಶಕವಾಗಿ ಸಸಿಗಳನ್ನು ವಿತರಿಸುವಂತೆ ನಿರ್ದೇಶನ ನೀಡಿದರು.ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವುದು, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಎಲ್ಲೆಡೆ ದೊರೆಯುವಂತಾಗಬೇಕು ಎಂದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸರ್ಕಾರ ಈಗಾಗಲೇ 135 ಕೋಟಿ ರೂ. ಬಿಡುಗಡೆ ಮಾಡಿದೆ. ಬಾಕಿ ಇರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಸದರು ಸೂಚಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕಾಮಗಾರಿ ನಿರ್ವಹಿಸುತ್ತಿರುವವರು 108 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಕ್ರಿಟಿಕಲ್ ಕೇರೆ ಸೆಂಟರ್ ನಿರ್ಮಾಣ ಮತ್ತಿತರ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ವೈದ್ಯಾಧಿಕಾರಿ ಅವರಿಗೆ ಸೂಚಿಸಿದರು.ಕೊಡಗು ಜಿಲ್ಲೆಯಲ್ಲಿ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಪಡೆಯುವಂತಾಗಬೇಕು. ಆ ನಿಟ್ಟಿನಲ್ಲಿ ಶಿಕ್ಷಣಾಧಿಕಾರಿ ಕ್ರಮವಹಿಸುವಂತೆ ಸಂಸದರು ನಿರ್ದೇಶನ ನೀಡಿದರು.

ಜಿಲ್ಲೆಯ ಹಾಡಿಗಳಲ್ಲಿ ಪೌಷ್ಟಿಕ ಆಹಾರ ವಿತರಣೆ ಜೊತೆಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...