ಬೆಂಗಳೂರು : ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಿನ್ನೆ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ ಹಾಗೂ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.
₹209 ಕೋಟಿ ವೆಚ್ಚದಲ್ಲಿ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ
• ಹಾಲಿ ಇರುವ ಮೀನುಗಾರಿಕೆ ಬಂದರುಗಳ ಆಧುನೀಕರಣವನ್ನು ₹84.57 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಒಪ್ಪಿಗೆ
• ನಾಲ್ಕು ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಶೇ.15 ರಷ್ಟು ಪರಿಷ್ಕರಣೆ
• ₹10.50 ಕೋಟಿ ವೆಚ್ಚದಲ್ಲಿ ಪ್ರಸ್ತುತಕಾರ್ಯನಿರ್ವಹಿಸುತ್ತಿರುವ ಗೋಶಾಲೆಗಳ ಬಲವರ್ಧನೆಗೆ ತೀರ್ಮಾನ
ವಡಗನಹಳ್ಳಿ ಗ್ರಾಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜಿನ ಕಟ್ಟಡ ಕಾಮಗಾರಿಯನ್ನು ₹149.75 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
• ₹56.92 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ವಸತಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಆಡಳಿತಾತ್ಮಕ ಅನುಮೋದನೆ
• ₹100 ಕೋಟಿ ವೆಚ್ಚದಲ್ಲಿ ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ 200 ಪಶು ವೈದ್ಯಕೀಯ ಸಂಸ್ಥೆಗಳಿಗೆ ನೂತನ ಕಟ್ಟಡಗಳ ನಿರ್ಮಾಣಕ್ಕೆ ತೀರ್ಮಾನ
ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಮೂರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಊರಾಗಿರುವ ಧಾರವಾಡ, ವಿದ್ಯಾಕಾಶಿ ಎಂದು ಪ್ರಖ್ಯಾತಿ ಗಳಿಸಿದೆ. ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ನಾಡಿಗೆ ಅಪಾರ ಕೊಡುಗೆ ನೀಡಿರುವ ಧಾರವಾಡವನ್ನು ಮಹಾನಗರ ಪಾಲಿಕೆಯಾಗಿಸಿ, ಆ ಮೂಲಕ ನಗರದ ಅಭಿವೃದ್ಧಿಗೆ ಬೆಂಬಲವಾಗಿ ನಿಲ್ಲುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ.
ಮೈಸೂರಿನ ಬನ್ನಿಮಂಟಪದಲ್ಲಿ ಸಾರಿಗೆ ಇಲಾಖೆ ವತಿಯಿಂದ ₹120 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಈ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನ ಸೊಬಗನ್ನು ಕಾಣಲು ದೇಶ – ವಿದೇಶಗಳಿಂದ… pic.twitter.com/4HflYKQoTJ
— DIPR Karnataka (@KarnatakaVarthe) January 2, 2025