ನವದೆಹಲಿ : ಕಾವೇರಿ ನದಿಯಲ್ಲಿ ನೀರು ಇಲ್ಲವೆಂದು ನಾಳೆ ( ಸೆ.21) ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೆಹಲಿಯಲ್ಲಿ ಇಂದು ನಡೆದ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ . ಮಳೆ ಕೊರತೆಯಿಂದ ನಾವು ಕಷ್ಟದಲ್ಲಿ ಇದ್ದೇವೆ. ಎರಡೂ ರಾಜ್ಯಗಳ ನಾಯಕರನ್ನು ಪ್ರಧಾನಿ ಕರೆದು ಮಾತಾಡಬೇಕು. ಕೇಂದ್ರ ಜಲಸಂಪನ್ಮೂಲ ಸಚಿವರ ಭೇಟಿಗೆ ಸಮಯ ಕೇಳಲಾಗಿದೆ ಎಂದರು. ನಾಳೆ ಸುಪ್ರೀಂಕೋರ್ಟ್ಗೆ ನೀರು ಇಲ್ಲವೆಂದು ಅರ್ಜಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಮ್ಮ ರಾಜ್ಯದಲ್ಲಿ ರೈತರು ಹಾಗೂ ಕುಡಿಯಲು 106 TMC ನೀರು ಬೇಕು. ಈಗ ಪ್ರಸ್ತುತ 51 TMC ಇದೆ. ನಾವು ನೀರಿಲ್ಲದೇ ಕಷ್ಟದಲ್ಲಿದ್ದೇವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣಾ ಸಮಿತಿ ಮುಂದೆ ನೀರು ಬಿಡಲು ಸಾಧ್ಯವಿಲ್ಲ ಎಂದು ಮನವಿ ಮಾಡಿದ್ದೇವೆ. ನಾವು ನೀರು ಕೊಡಲು ಆಗಲ್ಲ ಅಂಥ ಹೇಳಿದ್ದೇವೆ ಎಂದರು.
ರಾಜ್ಯದಲ್ಲಿ ಮಳೆ ಕೊರತೆಯಿಂದ ಡ್ಯಾಮ್ಗಳಲ್ಲಿ ನೀರು ಇಲ್ಲ. 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. 123 ವರ್ಷಗಳಲ್ಲಿ ಎಂದೂ ಇಷ್ಟು ಮಳೆ ಕೊರತೆ ಆಗಿರಲಿಲ್ಲ ಎಂದರು, ಅನ್ಯ ಕೆಲಸ ಹಿನ್ನೆಲೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಭೆಗೆ ಬಂದಿರಲಿಲ್ಲ. ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಕೇಂದ್ರ ಸಚಿವರು ಭಾಗಿಯಾಗಿದ್ದರು ಎಂದರು.
ಕಾವೇರಿ ನೀರು ವಿವಾದದಲ್ಲಿ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ನಾನು ಪ್ರಧಾನಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಸಮಯ ಕೇಳಿದ್ದೇನೆ. ಇಂದಿನ ಸಭೆಯಲ್ಲಿ ಎಲ್ಲಾ ಸಂಸದರು, ಕೇಂದ್ರ ಸಚಿವರು ಭಾಗವಹಿಸುತ್ತಿದ್ದಾರೆ. ಪಕ್ಷಬೇಧ ಮರೆತು ಸಹಕಾರ ನೀಡುತ್ತಿದ್ದಾರೆ. ಕೇಂದ್ರ ಜಲ ಶಕ್ತಿ ಸಚಿವರನ್ನು ಭೇಟಿ ಮಾಡಿದ್ದೇನೆ ಎಂದರು.
ನಮಗೆ ಕುಡಿಯುವ ನೀರು, ಬೆಳೆ ರಕ್ಷಣೆ, ಕೈಗಾರಿಕೆಗೂ ನೀರಿಲ್ಲ. ಹೀಗಾಗಿ ನಾವು ಬಹಳ ಕಷ್ಟದಲ್ಲಿದ್ದೇವೆ. CWMA, CWRA ಮುಂದೆ ಸಮರ್ಥವಾಗಿ ನಮ್ಮ ವಾಸ್ತವ ಪರಿಸ್ಥಿತಿಯನ್ನು ಮಂಡಿಸಿದ್ದೇವೆ. ಒಟ್ಟು ಮೂರು ಬಾರಿ ಸರ್ವ ಪಕ್ಷ ಸಭೆ ನಡೆಸಿದ್ದೇವೆ. 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿಲ್ಲ ಎಂದು CWMA ಮುಂದೆಯೂ ಮನವಿ ಸಲ್ಲಿಸಲಿದ್ದೇವೆ, ತಮಿಳುನಾಡು ವಾದ ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ನಮ್ಮ ತಕರಾರು ಮಂಡಿಸಿದ್ದೇವೆ ಎಂದರು.