
ಬೆಂಗಳೂರು: ವಿಧಾನಮಂಡಲ ಅಧಿವೇಶನದ ನಂತರ ಪಡಿತರ ಚೀಟಿಗಳ ಪರಿಷ್ಕರಣೆ ಕಾರ್ಯ ಆರಂಭಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಎಂಟಿಬಿ ನಾಗರಾಜ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ವಿಧಾನ ಮಂಡಲ ಕಲಾಪದ ನಂತರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಡಿತರ ಚೀಟಿಗಳ ಪರಿಷ್ಕರಣೆ ಕಾರ್ಯ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಕಳೆದ ಎರಡು ವರ್ಷಗಳಿಂದ ಬಿಪಿಎಲ್ ಕಾರ್ಡ್ ನೀಡುತ್ತಿಲ್ಲ. ದಕ್ಷಿಣ ಭಾರತದ ರಾಜ್ಯಗಳ ಪೈಕಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಗಳು ಕರ್ನಾಟಕದಲ್ಲಿ ಇದ್ದು, ಹೀಗಾಗಿ ಪಡಿತರ ಚೀಟಿಗಳನ್ನು ಪರಿಷ್ಕರಣೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.