ಬೆಂಗಳೂರು: ರಾಜ್ಯದಲ್ಲಿ ಬಣಂತಿಯರ ಸರಣಿ ಸಾವು ಪ್ರಕರಣದ ಬಳಿಕ ಆಹಾರ ಸುರಕ್ಷತಾ ಇಲಾಖೆ ಹಾಗೂ ಔಷಧಿ ನಿಯಂತ್ರಣ ಇಲಾಖೆಯನ್ನು ವಿಲೀನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಎರಡು ಇಲಾಖೆಗಳನ್ನು ವಿಲೀನಗೊಳಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಮರುನಾಮಕರಣಗೊಳಿಸಿ ಆದೇಶ ಹೊರಡಿಸಲಾಗಿದೆ. ಹೊಸ ಇಲಾಖೆಗೂ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಆಯುಕ್ತರೇ ಮುಖ್ಯಸ್ಥರಾಗಿರಲಿದ್ದಾರೆ. ಎರಡೂ ಇಲಾಖೆಗಳ ಅಧಿಕಾರಿಗಳು ಹಗೂ ಸಿಬ್ಬಂದಿಗಳು ಒಟ್ಟಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.
ಇನ್ನು ರಾಜ್ಯದಲ್ಲಿ ಪರಿಶಿಷ್ಟ ಜಾತಿ-ಪಂಗಡಗಳ ಸಮುದಾಯದ ಜನರಿಗೆ ಆರೋಗ್ಯ ಸೇವೆಗಾಗಿ ಹೆಚ್ಚು ಚಿಕಿತ್ಸಾಅ ವೆಚ್ಚ ಇರುವ ಕಾಯಿಲೆಗಳಿಗೆ ಹಾಗೂ ವಿರಳ ಆರೋಗ್ಯ ಸೇವೆ ಒದಗಿಸಲು ಕಾರ್ಫಸ್ ಫಂಡ್. ಒಟ್ಟು 45 ಕೋಟಿರೂಗಳನ್ನು ಸರ್ಕಾರ ಮೀಸಲಿಟ್ಟಿದೆ.