ಬೆಂಗಳೂರು : ಮತ್ತೆ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ‘CWRC’ ಆದೇಶ ಹೊರಡಿಸಿರುವ ಹಿನ್ನೆಲೆ ಅನ್ನದಾತರು ಮತ್ತೆ ಸಿಡಿದೆದ್ದಿದ್ದಾರೆ.
ಮಂಡ್ಯದಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ ‘CWRC’ ಆದೇಶ ಹೊರಡಿಸಿ ರೈತರಿಗೆ ಅನ್ಯಾಯ ಮಾಡಿದೆ. ತಮಿಳುನಾಡಿಗೆ ಕೂಡಲೇ ನೀರು ಬಿಡುವುದನ್ನು ನಿಲ್ಲಿಸಬೇಕು, ಇಲ್ಲವಾದಲ್ಲಿ ನಾಳೆಯಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಮಧ್ಯಾಹ್ನದ ನಂತರ ಬೆಂಗಳೂರು ಬಂದ್ ತೀವ್ರ ಸ್ವರೂಪ ಪಡೆದುಕೊಂಡಿತು. ಬೆಂಗಳೂರು ಬಂದ್ ಗೆ ಬೆಂಬಲ ನೀಡದ ಹೋಟೆಲ್ ಮೇಲೆ ಕಲ್ಲು ತೂರಾಟ ನಡೆಸಿ, ಹೋಟೆಲ್ ಒಳಗೆ ನುಗ್ಗಿ ದಾಂಧಲೆ ನಡೆಸಿದ್ದಾನೆ.