ವಯನಾಡ್ ಲೋಕಸಭಾ ಉಪಚುನಾವಣೆಗೆ ಮುನ್ನ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಸ್ಥಳೀಯ ಪೊಲೀಸರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ, ವಯನಾಡ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರ ಚಿತ್ರವಿರುವ ಆಹಾರ ಕಿಟ್ಗಳನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ನಂತರ, ಶನಿವಾರ ಪೊಲೀಸರು ಭಾರತೀಯ ನ್ಯಾಯ್ ಸಂಹಿತಾ ಸೆಕ್ಷನ್ 173 ಮತ್ತು ಜನ ಪ್ರಾತಿನಿಧ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.ಪ್ರಿಯಾಂಕಾ ಗಾಂಧಿ ಅವರ ಸಹೋದರ, ಸಂಸದ ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ ಸ್ಥಾನವನ್ನು ತೊರೆದ ನಂತರ ಪ್ರಿಯಾಂಕಾ ಗಾಂಧಿ ಅವರು ವಯನಾಡ್ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದಾರೆ. ವಯನಾಡ್ ಉಪಚುನಾವಣೆಗೆ ನವೆಂಬರ್ 13 ರಂದು ಮತದಾನ ನಡೆಯಲಿದೆ.
ಸುಮಾರು 30 ಆಹಾರ ಪ್ಯಾಕೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಯನಾಡ್ನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಲ್ಲಿ ಬದುಕುಳಿದವರಿಗೆ ಆಹಾರ ಕಿಟ್ಗಳನ್ನು ವಿತರಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಂಡರೆ, ಮತದಾರರ ಮೇಲೆ ಪ್ರಭಾವ ಬೀರಲು ಪ್ಯಾಕೆಟ್ಗಳನ್ನು ವಿತರಿಸಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಸಕ್ಕರೆ, ಅಕ್ಕಿ, ಚಹಾ ಪುಡಿ ಮುಂತಾದ ವಸ್ತುಗಳನ್ನು ಒಳಗೊಂಡಿರುವ ಆಹಾರ ಕಿಟ್ಗಳಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಚಿತ್ರಗಳಿವೆ ಎಂದು ವರದಿಗಳು ತಿಳಿಸಿವೆ.
#WATCH | Kerala: Ahead of the Wayanad Lok Sabha bypoll, food kits with pictures of Congress leader Rahul Gandhi and the party general secretary Priyanka Gandhi were seized by the flying squad of the Election Commission and the police from Thirunelly, in Wayanad district. pic.twitter.com/OBKRNWtheN
— ANI (@ANI) November 8, 2024