ಬೆಂಗಳೂರು: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಪ್ಯಾಕೇಜ್ ನೀಡಲಾಗಿದೆ.
ಸುಮಾರು 25 ಲಕ್ಷ ಕಟ್ಟಡ ಕಾರ್ಮಿಕರ ಖಾತೆಗೆ ತಲಾ 3 ಸಾವಿರ ರೂಪಾಯಿಯನ್ನು ನೇರ ವರ್ಗಾವಣೆ ಮಾಡಲಾಗಿದೆ. ಇದರೊಂದಿಗೆ ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ಒದಗಿಸುವ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಕಾರ್ಮಿಕ ಇಲಾಖೆಯಿಂದ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಕುರಿತಂತೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ 22 ಲಕ್ಷಕ್ಕೂ ಅಧಿಕ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ನೀಡಲಾಗುವುದು.
ಕೊರೋನಾ ಮೊದಲ ಅಲೆಯ ಸಂದರ್ಭದಲ್ಲಿ 16 ಲಕ್ಷ ಕಾರ್ಮಿಕರಿಗೆ ಆಹಾರದ ಕಿಟ್ ಜೊತೆಗೆ 5,000 ರೂ. ನೀಡಲಾಗಿತ್ತು ಈಗ ಕಾರ್ಮಿಕರಿಗೆ 3 ಸಾವಿರ ರೂ.ಗಳನ್ನು ಅವರ ಖಾತೆಗೆ ಜಮಾ ಮಾಡಲಾಗಿದೆ. ಇದರೊಂದಿಗೆ ಆಹಾರದ ಕಿಟ್ ನೀಡಲಾಗುತ್ತದೆ ಎಂದು ಹೇಳಲಾಗಿದೆ.