ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಊಟ ಮಾಡಿದ 100 ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ.
ಬೆಣ್ಣೆಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸೀಮಂತ ಕಾರ್ಯಕ್ರಮ ನಡೆದಿದ್ದು, ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಊಟ ಮಾಡಿದ ನಂತರ ಹೆಚ್ಚಿನವರಿಗೆ ಮಂದಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥರಾದವರನ್ನು ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. 20 ಕ್ಕೂ ಅಧಿಕ ಮಂದಿಯನ್ನು ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.