ಬೆಂಗಳೂರು: ಬೆಂಗಳೂರಿನಲ್ಲಿ ಫುಟ್ ಪಾತ್ ಒತ್ತುವರಿ ತೆರವು ವಿಚಾರವಾಗಿ ಬಿಬಿಎಂಪಿ ಕಾರ್ಯ ವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಎಲ್ಲಾ ಫುಟ್ ಪಾತ್ ಗಳ ಒತ್ತುವರಿ ತೆರವು ಮಾಡಬೇಕು ಎಂದು ಆದೇಶ ನೀಡಿದೆ.
ಬಿಬಿಎಂಪಿ ರಸ್ತೆ, ಫುಟ್ ಪಾತ್ ಸುಧಾರಿಸಲು ಮುಂದಾಗುತ್ತಿಲ್ಲ. ಒತ್ತುವರಿ ತೆರವಿನ ವಿಚರವಾಗಿ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸುತ್ತೇವೆ ಎಂದು ಹೈಕೋರ್ಟ್ ಪಾಲಿಕೆಯನ್ನು ತರಾಟೆಗೆ ತೆಗೆದುಕೊಂಡಿದೆ.
ಫೆಬ್ರವರಿ 1ರಂದು ಬಿಬಿಎಂಪಿ ಮುಖ್ಯ ಆಯುಕ್ತರೇ ಖುದ್ದು ಹೈಕೋರ್ಟ್ ಗೆ ಹಾಜರಾಗಿ ವಿವರಣೆ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿದೆ.