ನವದೆಹಲಿ: ದೆಹಲಿಯಲ್ಲಿ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಲಾಗಿದೆ. ವಾಯುಮಾಲಿನ್ಯ ಹೆಚ್ಚಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಲಾಗಿದೆ.
ದೆಹಲಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಆನ್ಲೈನ್ ನಲ್ಲಿ ತರಗತಿಗಳನ್ನು ನಡೆಸಬೇಕು. ಸರ್ಕಾರಿ ಕಚೇರಿಗಳಿಗೆ ವರ್ಕ್ ಫ್ರಮ್ ಹೋಮ್ ಕಡ್ಡಾಯವಾಗಿರುತ್ತದೆ. ನವೆಂಬರ್ 17 ರವರೆಗೆ ಎಲ್ಲಾ ರೀತಿಯ ಕಟ್ಟಡ ಕಾಮಗಾರಿ ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಕ್ಕಳು ಕಲುಷಿತ ಗಾಳಿಯನ್ನು ಸೇವಿಸದಂತೆ ತಡೆಯಲು ಸೋಮವಾರದಿಂದ ಒಂದು ವಾರದವರೆಗೆ ಶಾಲೆಗಳು ಭೌತಿಕವಾಗಿ ಮುಚ್ಚಲ್ಪಡುತ್ತವೆ. ಆನ್ಲೈನ್ ತರಗತಿ ನಡೆಯಲಿವೆ. ನಿರ್ಮಾಣ ಚಟುವಟಿಕೆಗಳಿಗೆ ನವೆಂಬರ್ 14-17 ರವರೆಗೆ ಅನುಮತಿ ಇರಲ್ಲ ಎಂದು ಹೇಳಿದ್ದಾರೆ.
ಸರ್ಕಾರಿ ಕಚೇರಿಗಳು ಒಂದು ವಾರದವರೆಗೆ 100% ಸಾಮರ್ಥ್ಯದಲ್ಲಿ ಮನೆಯಿಂದಲೇ(WFH) ಕಾರ್ಯನಿರ್ವಹಿಸುತ್ತವೆ. ಖಾಸಗಿ ಕಚೇರಿಗಳಿಗೆ ಸಾಧ್ಯವಾದಷ್ಟು WFH ಆಯ್ಕೆಗೆ ಹೋಗಲು ಸಲಹೆ ನೀಡಲಾಗುವುದು ಎಂದು ತಿಳಿಸಿದ್ದಾರೆ.