alex Certify ಬಿಜೆಪಿ ಹಿರಿಯ ನಾಯಕ ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿ ಜನ್ಮದಿನದ ಶುಭ ಕೋರಿದ ಸುಷ್ಮಾ ಸ್ವರಾಜ್ ಪುತ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಹಿರಿಯ ನಾಯಕ ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿ ಜನ್ಮದಿನದ ಶುಭ ಕೋರಿದ ಸುಷ್ಮಾ ಸ್ವರಾಜ್ ಪುತ್ರಿ

ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಸೋಮವಾರ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರನ್ನು ಭೇಟಿ ಮಾಡಿ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಅಡ್ವಾಣಿ ಅವರ ಹುಟ್ಟುಹಬ್ಬದ ನಿಮಿತ್ತ ಬಾನ್ಸುರಿ ಅವರು ಚಾಕೊಲೇಟ್ ಕೇಕ್ ಅನ್ನು ಕೂಡ ನೀಡಿದ್ದಾರೆ. ತಮ್ಮ ತಾಯಿ ಸುಷ್ಮಾ ಸ್ವರಾಜ್ ಅವರು ಬದುಕಿದ್ದಾಗ ಪ್ರತಿವರ್ಷ ತಪ್ಪದೆ ಅಡ್ವಾಣಿ ಹುಟ್ಟುಹಬ್ಬಕ್ಕೆ ಅವರ ನಿವಾಸಕ್ಕೆ ಹೋಗಿ ಶುಭ ಕೋರುತ್ತಿದ್ದರು. ಈ ಸಂಪ್ರದಾಯವನ್ನು ಅವರ ಅನುಪಸ್ಥಿತಿಯಲ್ಲಿ ಪುತ್ರಿ ಪಾಲಿಸಿದ್ದಾರೆ. ಸೋಮವಾರದಂದು (ನವೆಂಬರ್ 8) ಮಾಜಿ ಉಪ ಪ್ರಧಾನಿ 94ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

ಗೌರವಾನ್ವಿತ ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತೇನೆ. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಬಾನ್ಸುರಿ ಸ್ವರಾಜ್ ಟ್ವಿಟ್ಟರ್‌ನಲ್ಲಿ ಅಡ್ವಾಣಿ ಅವರೊಂದಿಗಿನ ಚಿತ್ರದೊಂದಿಗೆ ಪೋಸ್ಟ್ ಮಾಡಿದ್ದಾರೆ.

ಅಡ್ವಾಣಿ ಅವರ ಜನ್ಮದಿನದಂದು ಸುಷ್ಮಾ ಸ್ವರಾಜ್ ಅವರು ಚಾಕೊಲೇಟ್ ಕೇಕ್ ತೆಗೆದುಕೊಂಡು ಹೋಗುತ್ತಿದ್ದ ಸಿಹಿ ಸಂಪ್ರದಾಯವನ್ನು ಮುಂದುವರೆಸುತ್ತಿರುವುದಾಗಿ ಬಾನ್ಸುರಿ ಹೇಳಿದ್ದಾರೆ.

ಸುಷ್ಮಾ ಸ್ವರಾಜ್ ಅವರು ಹೃದಯಾಘಾತದಿಂದ ಆಗಸ್ಟ್ 6, 2019 ರಂದು ನಿಧನರಾಗಿದ್ದಾರೆ. ಸುಷ್ಮಾ ಸ್ವರಾಜ್ ಅವರಿಗೆ ಸೋಮವಾರ ಮರಣೋತ್ತರವಾಗಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಲಾಗಿದೆ.

ಇದಕ್ಕೂ ಮುನ್ನ, ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ವೈಯಕ್ತಿಕವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...