alex Certify ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಗಮನಕ್ಕೆ : ವಿವಿಧ ಯೋಜನೆಗಳಡಿ ʻವಿದ್ಯಾರ್ಥಿವೇತನʼಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಗಮನಕ್ಕೆ : ವಿವಿಧ ಯೋಜನೆಗಳಡಿ ʻವಿದ್ಯಾರ್ಥಿವೇತನʼಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಿವಿಧ ಯೋಜನೆಗಳಡಿ  ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

2023-24ನೇ ಸಾಲಿನಲ್ಲಿ ವಿವಿಧ ಕೋರ್ಸುಗಳಲ್ಲಿ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳಡಿ ವಿದ್ಯಾರ್ಥಿವೇತನ ನೀಡಲು ಆನ್ ಲೈನ್ ಅರ್ಜಿಗಳನ್ನು ಸಲ್ಲಿಸುವ ದಿನಾಂಕವನ್ನು 31.12.2023 ವಿಸ್ತರಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2023-24ನೇ ಸಾಲಿನಲ್ಲಿ ವಿವಿಧ ಕೋರ್ಸುಗಳಲ್ಲಿ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸೇವಾ ಸಿಂಧು ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:20.12.2023 ನಿಗದಿಪಡಿಸಲಾಗಿರುತ್ತದೆ.

ಮುಂದುವರೆದು ಸಾರ್ವಜನಿಕರು ಹಾಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಮನವಿ ಸಲ್ಲಿಸುತ್ತಿರುವುದರಿಂದ ಸದರಿ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದ್ದು, ಸದರಿ ಯೋಜನೆಗಳಿಗೆ ವ್ಯಾಪಕ ಪ್ರಚಾರವನ್ನು ನೀಡಿ ಹೆಚ್ಚಿನ ಅರ್ಜಿಗಳು ಸ್ವೀಕೃತವಾಗುವಂತೆ ಕ್ರಮ ವಹಿಸಲು ಸೂಚಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...