ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಕೆಲವು ದಿನಗಳ ಕಾಲ ಕೆಲ ಸಮಯ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿ.ಎಂ.ಆರ್.ಸಿ.ಎಲ್ ( BMRCL ) ತಿಳಿಸಿದೆ. ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆ ನಡೆಸುವ ಸಲುವಾಗಿ ಆಗಸ್ಟ್ 20, 23, 24 ಹಾಗೂ 29ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಕೆಂಗೇರಿ, ಚೆಲ್ಲಘಟ್ಟ ಹಗೂ ಬೈಯ್ಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಹಾಗಾಗಿ ವಾಣಿಜ್ಯ ಸೇವೆ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಆಗಸ್ಟ್ 23ರಂದು ಕೆಂಗೇರಿ ಹಾಗೂ ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 7 ಗಂಟೆಯವರೆಗೆ ಯಾವುದೇ ಮೆಟ್ರೋ ಸಚಾರವಿರುವುದಿಲ್ಲ. ಮೈಸೂರು ರಸ್ತೆ ಹಾಗೂ ಸ್ವಾಮಿ ವಿವೇಕಾನಂದ ನಿಲ್ದಾಣಗಳ ನಡುವೆ ಮಾತ್ರ ಈ ಅವಧಿಯಲ್ಲಿ ಮೆಟ್ರೋ ಸಂಚರಿಸಲಿದೆ. ಬಳಿಕ ಬೆಳಿಗ್ಗೆ 7 ಗಂಟೆಯಿಂದ ಎಂದಿನಂತೆ ಕೆಂಗೇರಿಯಿಂದ ಬೈಯ್ಯಪ್ಪನಹಳ್ಳಿ ನಿಲ್ದಾಣದ ನಡುವೆ ಮೆಟ್ರೋ ಸಂಚಾರವಿರಲಿದೆ.
ಆಗಸ್ಟ್ 20 ಹಾಗೂ 29ರಂದು ಬಯ್ಯಪ್ಪನಹಳ್ಳಿ ಟರ್ಮಿನಲ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ ಹಾಗೂ ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ ಮಾರ್ಗಗಳ ನಡುವೆ ಬೆಳಿಗ್ಗೆ 7 ಗಂಟೆಯವರೆಗೆ ಯಾವುದೇ ರೈಲು ಸಂಚಾರವಿರುವುದಿಲ್ಲ. ಈ ಅವಧಿಯಲ್ಲಿ ಸ್ವಾಮಿ ವಿವೇವಾಕನಂದ ಮೆಟ್ರೋ ನಿಲ್ದಾಣದಿಂದ ಮಾತ್ರ ಮೆಟ್ರೋ ಸಂಚಾರ ಲಭ್ಯವಿರುತ್ತದೆ.ಇನ್ನು ಹಸಿರು ಮಾರ್ಗ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿ.ಎಂ.ಆರ್.ಸಿ.ಎಲ್ ತಿಳಿಸಿದೆ.