ಮಡಿಕೇರಿ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಶೇಷಚೇತನರಿಗೆ ಸರ್ಕಾರದಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಈ ಯೋಜನೆಯ ಪ್ರಯೋಜನವನ್ನು ಜಿಲ್ಲೆಯ ವಿಶೇಷಚೇತನರು ಪಡೆದುಕೊಳ್ಳಲು ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಯುಡಿಐಡಿ ಕಾರ್ಡ್ ಕಡ್ಡಾಯವಾಗಿದೆ.
ಯುಡಿಐಡಿ ಕಾರ್ಡ್ ಪಡೆಯಲು ಯುಡಿಐಡಿ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ನೋಂದಾಯಿಸಿ ಯುಡಿಐಡಿ ಕಾರ್ಡ್ಗಳನ್ನು ಪಡೆದುಕೊಳ್ಳಬೇಕಿದೆ. ಯುಡಿಐಡಿ ಕಾರ್ಡ್ (ಗುರುತಿನ ಚೀಟಿ) ಹೊಂದಿರುವ ವಿಶೇಷಚೇತನರು ಮಾತ್ರ ಸರ್ಕಾರದ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಯುಡಿಐಡಿ ಕಾರ್ಡ್ ಪಡೆಯದೇ ಇರುವ ವಿಶೇಷಚೇತನರು ಸರ್ಕಾರದ ಯೋಜನೆಗಳನ್ನು ಪಡೆಯಲು ಅರ್ಹರಲ್ಲ. ಆದ್ದರಿಂದ ಜಿಲ್ಲೆಯ ವಿಶೇಷಚೇತನರು ಕಡ್ಡಾಯವಾಗಿ ಯುಡಿಐಡಿ ಕಾರ್ಡ್ಗಳನ್ನು ಪಡೆದುಕೊಂಡು ವಿಶೇಷಚೇತನರಿಗೆ ಸರ್ಕಾರ ರೂಪಿಸಿರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್ಡಬ್ಲ್ಯು ಹಾಗೂ ತಾಲ್ಲೂಕು ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ.8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ. ಮೊ.ಸಂ. 9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ. 807392914 ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ. 08272-295829 ರಲ್ಲಿ ವಿಕಲಚೇತನರ ಸಹಾಯವಾಣಿ ಕೇಂದ್ರದ ಮಾಹಿತಿ ಸಲಹೆಗಾರರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.