alex Certify BIG NEWS : ರಾಜ್ಯದ ದೈಹಿಕ ಶಿಕ್ಷಕರಿಗೂ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ : ರಾಜ್ಯ ಸರ್ಕಾರ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ದೈಹಿಕ ಶಿಕ್ಷಕರಿಗೂ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ದೈಹಿಕ ಶಿಕ್ಷಕರಿಗೆ ಮೊದಲ ಬಾರಿಗೆ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (3)ರ ಸುತ್ತೋಲೆಯಲ್ಲಿ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಆಯೋಜಿಸಲು ಸೂಚಿಸಲಾಗಿತ್ತು. ಮುಂದುವರೆದು ಮಾನ ಆಯುಕ್ತರ ಅಧಕ್ಷತೆಯಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾಮಟ್ಟದಲ್ಲಿ ಆಯೋಜಿಸುವ ಸಂಬಂಧ ರಾಜಾಧಕರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ದಿನಾಂಕ: 03-02-2025ರಂದು ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಅಯೋಜಿಸುವಾಗ ಈ ಕೆಳಕಂಡಂತೆ ಸೇರ್ಪಡೆ ಮಾಡಿಕೊಂಡು ಕ್ರೀಡಾಕೂಟವನ್ನು ಆಯೋಜಿಸಲು ಸೂಚಿಸಿದೆ.

ದೈಹಿಕ ಶಿಕ್ಷಕರನ್ನು ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವನ್ನು ಕಲ್ಪಿಸುವುದು. ಪೋಲಿಸ್ (ಸಮವಸ್ತ್ರದಾರಿಗಳಿಗೆ ಹಾಗೂ, ಕ್ರೀಡಾ ಮೀಸಲಾತಿಯಡಿ ಆಯ್ಕೆಯಾದ ಎಲ್ಲಾ ನೌಕರರು ಭಾಗವಹಿಸಲು ಅರ್ಹಗಿರುವುದಿಲ್ಲ. ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಗಳ ಬ್ಯಾಜ್ ನಂಬರ್ ಸಿಬ್ಬಂದಿಗಳು( ಕ್ರೀಡಾ ಮೀಸಲಾತಿಯಡಿ ಆಯ್ಕೆಯಾದ ನೌಕರರನ್ನು ಹೊರತುಪಡಿಸಿ) ಹಾಗೂ ಲಿಪಿಕ ಸಿಬ್ಬಂದಿಗಳು ಸಹ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅನುಮತಿ ನೀಡುವುದು ಎಂದು ಆದೇಶಿಸಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...