ಉಡುಪಿ : ‘ಚಂದ್ರಯಾನ-3’ ಯಶಸ್ವಿಯಾಗಲೆಂದು ದೇಶಾದ್ಯಂತ ಪೂಜೆ ಹೋಮ ಹವನಗಳನಡೆಸಲಾಗಿದೆ. ಇಂದು ಸಂಜೆ 6:04 ಕ್ಕೆ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆಗಲಿದೆ.
ಅದೇ ರೀತಿ ಉಡುಪಿ ಮಠದ ಪೇಜಾವರ ಶ್ರೀಗಳು ಶ್ರೀ ಕೃಷ್ಣ ದೇವರಿಗೆ ತುಪ್ಪದ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾರೆ. ಚಂದ್ರಯಾನ-3’ ಯಶಸ್ವಿಯಾಗಲೆಂದು ತುಪ್ಪದ ದೀಪ ಹಚ್ಚಿ ಪೂಜೆ ಸಲ್ಲಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಗೆ ಕ್ಷಣಗಣನೆಯಾಗಿದ್ದು, ರಾಜ್ಯದೆಲ್ಲೆಡೆ ಹೋಮ ಹವನ, ಪ್ರಾರ್ಥನೆ ಜೋರಾಗಿದೆ. ಚಂದ್ರಯಾನ-3 ಯಶಸ್ವಿಯಾಗಲೆಂದು ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ -3’ ಲ್ಯಾಂಡಿಂಗ್ ಲೈವ್ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಂಜೆ 5 ಗಂಟೆ 10 ನಿಮಿಷಕ್ಕೆ ಚಂದ್ರಯಾನ-3 ಲೈವ್ ಆರಂಭವಾಗಲಿದೆ.
ಸುಮಲತಾ ಶುಭ ಹಾರೈಕೆ
ಇಂದು ನಿಜವಾಗಿಯೂ ಇಂದು ಭಾರತಕ್ಕೆ ಐತಿಹಾಸಿಕ ದಿನ. ಈ ದಿನಕ್ಕೊಸ್ಕರ ಇಡಿ ದೇಶ ಕಾಯುತ್ತಿದೆ. ಚಂದ್ರಯಾನ 3 ಯಶಸ್ವಿಯಾಗಲಿ ಎಂದು ಇಡಿ ಇಸ್ರೋ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಂಸದೆ ಸುಮಲತಾ ಹೇಳಿದರು.