ನವದೆಹಲಿ: ದೇಶದ ಹಲವು ರಾಜ್ಯಗಳಿಗೆ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುವ್ಯ ಭಾರತದ ಹಲವು ರಾಜ್ಯಗಳಲ್ಲಿ ಈ ಶೀತಗಾಳಿ ಎರಡು ದಿನಗಳ ಕಾಲ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದರ ಮಧ್ಯೆಯೇ ಈಗಾಗಲೇ ಹಲವು ರಾಜ್ಯಗಳಲ್ಲಿ ಕನಿಷ್ಠ ತಾಪಮಾನ ಕೂಡ ದಾಖಲಾಗುತ್ತಿದೆ. ದೆಹಲಿಯಲ್ಲಿ ಭಾನುವಾರ ಕನಿಷ್ಠ 8 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗಿತ್ತು. ದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸುತ್ತಿದ್ದು, ಜನರು ಚಳಿಯಲ್ಲಿ ನಡುಗುವಂತಾಗುತ್ತಿದೆ.
ಹವಾಮಾನ ವೈಪರೀತ್ಯದಿಂದಾಗಿ ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ್, ಮಧ್ಯಪ್ರದೇಶ, ಪಂಜಾಬ್, ಹರಿಯಾಣ ರಾಜ್ಯಗಳಲ್ಲಿ ಚಳಿಗಾಳಿ ಬೀಸಲಿದೆ. ಅಲ್ಲದೇ, ಎರಡು ದಿನಗಳ ನಂತರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.