ಬೆಂಗಳೂರು: ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್ ಅವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಓಡಿಶಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಎಂ.ಬಿ. ಪಾಟೀಲ್ ಅವರ ಮನೆಯಲ್ಲಿದ್ದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಕಳುವಾಗಿದ್ದವು. ಈ ಪ್ರಕರಣ ಸಂಬಂಧ ಇದೀಗ ಎಂ.ಬಿ. ಪಾಟೀಲ್ ಅವರ ಮನೆಯಲ್ಲಿ ಲಾಂಡ್ರಿ ಕೆಲಸ ಮಾಡುತ್ತಿದ್ದ ಜಯಂತ್ ದಾಸ್ ಎಂಬಾತನನ್ನು ಪೊಲಿಸರು ಓಡಿಶಾದಲ್ಲಿ ಬಂಧಿಸಿದ್ದಾರೆ.
ಆರೋಪಿಯನ್ನು ಐದು ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. 5 ವರ್ಷಗಳಿಂದ ಎಂ.ಬಿ. ಪಾಟೀಲ್ ಮನೆಯಲ್ಲಿ ಲಾಂಡ್ರಿ ಕೆಲಸ ಮಾಡುತ್ತಿದ್ದ ಜಯಂತ್ ದಾಸ್, ಹಣ, ಬ್ರ್ಯಾಂಡೆಡ್ ವಾಚ್ ಸೇರಿದಂತೆ ಹಲವು ವಸ್ತುಗಳನ್ನು ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಎಂ.ಬಿ. ಪಾಟೀಲ್ ಅವರ ಮನೆಯಲ್ಲಿ ಅಡುಗೆ ಕೆಲಸಕ್ಕೆ ಇದ್ದಾತನಿಂದ ಸದಾಶಿವ ನಗರ ಠಾಣೆಗೆ ದೂರು ನೀಡಲಾಗಿತ್ತು.